ಬಿಎಸ್​​ವೈ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Webdunia
ಗುರುವಾರ, 23 ಫೆಬ್ರವರಿ 2023 (18:16 IST)
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ನನ್ನ ಮೇಲೆ ಬಹಳ ಪ್ರೀತಿಯಿದೆ. ನನಗೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಹೀಗಾಗಿ ಯಡಿಯೂರಪ್ಪಗೆ ನಾನು ಧನ್ಯವಾದ ತಿಳಿಸುತ್ತೇನೆ. ಸಿಎಂ ಸ್ಥಾನದಿಂದ ಇಳಿಸಿದ ಮೇಲೆ ಅವರು ಸ್ವಲ್ಪ ಡಿಸ್ಟರ್ಬ್ ಆಗಿದ್ದಾರೆ ಎಂದು ವಿಜಯಪುರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧಿಸದ ವಿಚಾರವಾಗಿ ಯಡಿಯೂರಪ್ಪ ಬುಧವಾರ ವಿಧಾನಸಭೆಯಲ್ಲಿ ಉಲ್ಲೇಖಿಸಿದ್ದರು. ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಕ್ಷೇತ್ರ ಬದಲಾಯಿಸುತ್ತಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಎಸ್​​ವೈಗೆ ದೇವರು ಆಯುಷ್ಯ, ಆರೋಗ್ಯ ಕೊಡಲೆಂದು ಪ್ರಾರ್ಥಿಸುತ್ತೇನೆ. ನಾನು ಬಾದಾಮಿ ಕ್ಷೇತ್ರದಿಂದ ಗೆಲ್ಲುವುದಿಲ್ಲ ಎಂದೇನಿಲ್ಲ. ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತೇನೆ. ಬಾದಾಮಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತೇನೆ. 5 ವರ್ಷ ಶಾಸಕನಾಗಿ ಕ್ಷೇತ್ರದ ಜನರ ಕಷ್ಟ ಸುಖಕ್ಕೆ ಸ್ಪಂದಿಸಿದ್ದೇನೆ. ಹೀಗಾಗಿ ಬಾದಾಮಿ ಜನರಿಗೆ ದ್ರೋಹ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ತೀರ್ಮಾನಿಸುವುದು ನನಗೆ ಬಿಟ್ಟ ವಿಚಾರ. ನಂತರ ಕಾಂಗ್ರೆಸ್ ಪಕ್ಷ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments