ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವೃತ್ತಿ ಸಮಯ ಹತ್ತಿರ ಬಂದಿದೆ ಎನ್ನುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ರಚನೆ ಮಾಡಿರುವ ಎಐಸಿಸಿ ಓಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಎಂಬ ಪುನರ್ವಸತಿ ಕೇಂದ್ರವೇ ಸಾಕ್ಷಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಸೇವೆ ಸಾಕು, ರಾಜೀನಾಮೆ ಕೊಟ್ಟು ನಿವೃತ್ತರಾಗಿ ಎಂದು ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಹೇಳುತ್ತಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ಈ ರಬ್ಬರ್ ಸ್ಟ್ಯಾಂಪ್ ಕುರ್ಚಿ ಇದ್ದರೆಷ್ಟು, ಬಿಟ್ಟರೆಷ್ಟು. ನಿಮಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿ ಒಬಿಸಿ ಒಬಿಸಿ ಮತವನ್ನು ಸೆಳೆಯುವ ಸಲುವಾಗ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚನೆ ಮಾಡಿದೆ. ಇದೀಗ ಈ ತಂತ್ರಗಾರಿಕೆ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನುರ ರಾಷ್ಟ್ರಮಟ್ಟದ ಜವಾಬ್ದಾರಿ ನೀಡಿ, ಸಿಎಂ ಕುರ್ಚಿಯಿಂದ ಕೆಳಗಿಳಿಸಲಾಗುತ್ತೆ ಎಂಬ ಚರ್ಚೆ ಶುರುವಾಗಿದೆ.