ಬೆಂಗಳೂರು: ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದೊಂದಿಗೆ ಅವರು ಮಾತನಾಡಿದ್ದಾರೆ.
ರಾಜ್ಯದಲ್ಲಿ ಕುರ್ಚಿ ತಿಕ್ಕಾಟದ ವಿಚಾರ ಭಾರೀ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್ ಬಣ ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿದ್ದರೆ, ಇತ್ತ ಸಿದ್ದರಾಮಯ್ಯನವರು ಬಿಟ್ಟು ಕೊಡುತ್ತಿಲ್ಲ ಎನ್ನಲಾಗುತ್ತಿದೆ. ಇದರ ನಡುವೆ ಮಾಧ್ಯಮದ ಮುಂದೆ ಅವರು ಮಹತ್ವದ ಮಾತನಾಡಿದ್ದಾರೆ.
ಇನ್ನು ಮಾಧ್ಯಮ ಪ್ರತಿನಿಧಿಗಳು ಡಿಕೆಶಿಯವರು ಸಿಎಂ ಆಗ್ತಾರಾ ಸರ್ ಎಂದು ಪ್ರಶ್ನಿಸಿದ್ದಕ್ಕೆ ಹೈಕಮಾಂಡ್ ಹೇಳಿದಂತೆ ಕೇಳ್ತೀವಿ ಎಂದರೂ ಅದೇ ಪ್ರಶ್ನೆ ಕೇಳ್ತೀರಲ್ಲ. ಹೈಕಮಾಂಡ್ ಏನು ಹೇಳ್ತದೋ ಅದನ್ನೇ ಮಾಡ್ತೇವೆ ಎಂದಿದ್ದಾರೆ.
ಸರ್ಕಾರದಲ್ಲಿ ಯಾವುದೇ ಬದಲಾವಣೆ ಮಾಡುವ ಸಂಬಂಧ ನಮ್ಮಲ್ಲಿ ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಹಾಗೂ ಡಿ.ಕೆ.ಶಿವಕುಮಾರ್ ಒಪ್ಪಬೇಕು.
ಹೈಕಮಾಂಡ್ ಅನ್ನು ಐದು ತಿಂಗಳ ಹಿಂದೆ ಭೇಟಿಯಾದಾಗ ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇನೆ ಎಂದಿದ್ದಾರೆ.