Publish Date: Mon, 15 Jan 2018 (19:28 IST)
Updated Date: Mon, 15 Jan 2018 (19:30 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಿಂದ ಹೊರಬಂದು ಗೆದ್ದು ತೋರಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇದುವರೆಗೆ ಒಮ್ಮೆಯೂ ಅವರ ಸಾಮರ್ಥ್ಯ ಪ್ರದರ್ಶನ ಮಾಡಿಲ್ಲ ಎಂದು ವ್ಯಂಗವಾಡಿದ್ದಾರೆ.
2006ರಲ್ಲಿ ಜೆಡಿಎಸ್ ತೊರೆದು ಹೋದಾಗ ಕಾಂಗ್ರೆಸ್ ಶಕ್ತಿಯೊಂದಿಗೆ ಉಪಚುನಾವಣೆಯಲ್ಲಿ ಕೇವಲ 200 ಮತಗಳ ಅಂತರದಿಂದ ಗೆದ್ದಿದ್ದಾರೆ. ಆದರೆ, ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅವಕಾಶವಾದಿ ಪಕ್ಷಗಳಾಗಿದ್ದು, ಪರಿಸ್ಥಿತಿಯ ಲಾಭ ಪಡೆದು ಪ್ರಾದೇಶಿಕ ಪಕ್ಷಗಳನ್ನು ಹಣಿಯುತ್ತಿವೆ ಎಂದ ಅವರು, ದೇವೇಗೌಡರು ಸ್ವತಂತ್ರವಾಗಿ ಚುನಾವಣೆಯಲ್ಲಿ ಗೆದ್ದು ತೋರಿಸಿದ್ದಾರೆ. ಅಷ್ಟೇ ಏಕೆ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತ ಬಂದಿದ್ದು, ಜೆಡಿಎಸ್ ಕಟ್ಟಿ ಬೆಳೆಸಿದ್ದಾರೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.