Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸಂಪೂರ್ಣ ಮುಸ್ಲಿಂ ಆಗಿದ್ದಾರೆ, ಸುನ್ನತ್ ಮಾಡಿಸಿಕೊಳ್ಳುವುದಷ್ಟೇ ಬಾಕಿ: ಪ್ರತಾಪಸಿಂಹ ವ್ಯಂಗ್ಯ

Former MP Pratapasimha

Sampriya

ಮೈಸೂರು , ಸೋಮವಾರ, 4 ನವೆಂಬರ್ 2024 (14:09 IST)
ಮೈಸೂರು: ಮುಸ್ಲಿಂ ಸಮುದಾಯವನ್ನು ಓಲೈಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸುನ್ನತ್ ಮಾಡಿಸಿಕೊಳ್ಳುವುದಷ್ಟೇ ಬಾಕಿ, ಉಳಿದ ಎಲ್ಲಾ ದೃಷ್ಟಿಯಿಂದಲೂ ಅವರು ಸಂಪೂರ್ಣವಾಗಿ ಮುಸ್ಲಿಂ ಆಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದರು.

ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಿದ್ದ ನೊಟೀಸ್ ವಾಪಸ್ ಪಡೆಯಲು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಷಯವಾಗಿ ಮೈಸೂರಿನಲ್ಲಿ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದರು.

ನೊಟೀಸ್ ವಾಪಸ್ ತೆಗೆದುಕೊಳ್ಳಿ ಎಂದು ಸೂಚಿಸಿದರೆ ಸಮಸ್ಯೆ ಬಗೆಹರಿಯುತ್ತಾ?. ಸಿದ್ದರಾಮಯ್ಯ ಅವರಿಗೆ ಉದ್ದೇಶಶುದ್ದಿ ಇದ್ದರೆ, ನೊಟೀಸ್ ವಾಪಸ್ ತೆಗೆದುಕೊಳ್ಳಿ ಎಂದು ಸೂಚನೆ ನೀಡುವ ಬದಲು ಗೆಝೆಟ್ ನೋಟಿಫಿಕೇಶನ್ ನ್ನು ವಾಪಸ್ ಪಡೆಯಲಿ ಎಂದು ಸವಾಲು ಹಾಕಿದರು. ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ವಕ್ಫ್ ಗೆ ಏಕೆ ಅನ್ವಯ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

ವಕ್ಫ್ ವಿಚಾರದಲ್ಲಿ ವಿಪಕ್ಷಗಳು ಶಾಂತಿ ಕದಡುವ ಕೆಲಸ ಮಾಡುತ್ತಿವೆ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ಗಲಭೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಪ್ರಕರಣಗಳನ್ನು ವಾಪಸ್ ಪಡೆಯಲು ಬಿಜೆಪಿ ಹೇಳಿತ್ತಾ? ನೊಟೀಸ್ ಕೊಡುವುದಕ್ಕೆ ನಾವು ಹೇಳಿದ್ದೆವಾ? ಎಂದು ತಿರುಗೇಟು ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ್ರೋಹಿ ಜಮೀರ್ ಇಟ್ಕೊಂಡು ಸಿದ್ದರಾಮಯ್ಯ ವಕ್ಫ್ ಆಟ ಆಡ್ತಿದ್ದಾರೆ: ಬಿವೈ ವಿಜಯೇಂದ್ರ