Select Your Language

Notifications

webdunia
webdunia
webdunia
webdunia

ಸ್ವ ಕ್ಷೇತ್ರ ವರುಣಾದಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ ಕಾಡುತ್ತಿದೆ: ಆರ್‌.ಅಶೋಕ್ ವ್ಯಂಗ್ಯ

R Ashok

Sampriya

ಬೆಂಗಳೂರು , ಮಂಗಳವಾರ, 2 ಏಪ್ರಿಲ್ 2024 (15:39 IST)
ಬೆಂಗಳೂರು:  2018ರಲ್ಲಿ ಸೋಲಿನ ಭಯದಿಂದ ತಮ್ಮ ಸ್ವಕ್ಷೇತ್ರ ವರುಣಾದಿಂದ ಬಾದಾಮಿಗೆ ಪಲಾಯನ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಈಗ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ ಟೀಕಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಗ್ಯಾರೆಂಟಿಗಳು ಜನರಿಗೆ ತೃಪ್ತಿ ತಂದಿಲ್ಲ, ಬಿಟ್ಟಿ ಭಾಗ್ಯಗಳು ತಮ್ಮ ಕೈ ಹಿಡಿಯುವುದಿಲ್ಲ ಎಂದು ಗ್ಯಾರೆಂಟಿ ಆಗುತ್ತಿದ್ದಂತೆ ಸಿದ್ದರಾಮಯ್ಯನವರು ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ.

ತವರು ಕ್ಷೇತ್ರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲಾದರೆ ಕುರ್ಚಿ ಬಿಟ್ಟು ಇಳಿಯಬೇಕಾತ್ತದೆ ಎಂದು ಸಿಕ್ಕಸಿಕ್ಕ ಸಣ್ಣ ಪುಟ್ಟ ವಿಪಕ್ಷಗಳ ಮುಖಂಡರನ್ನೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಕನಿಷ್ಠ ಪಕ್ಷ ಠೇವಣಿ ಉಳಿಸಿಕೊಳ್ಳಬೇಕು, ಸೋಲಿನ ಅಂತರವಾದರೂ ಕಡಿಮೆ ಮಾಡಿಕೊಳ್ಳಬೇಕು ಅಂತ ಸಿದ್ದರಾಮಯ್ಯನವರು ಮೂರು ದಿನ ಮೈಸೂರಿನಲ್ಲೇ ಠಿಕಾಣಿ ಹೂಡಿದ್ದಾರೆ.

ಸಿಎಂ @siddaramaiah
 ನವರೇ? ನಿನ್ನೆ ವರುಣಾ ತಮ್ಮ ಬುರುಡೆ ಭಾಷಣ ಕೇಳಲು ಆಸಕ್ತಿ ಇಲ್ಲದೆ ಜಾಗ ಖಾಲಿ ಮಾಡಿದ ಜನರ ನಡೆ ನೋಡಿದ ಮೇಲೆ ಜನರ ಮನಸ್ಸಿನಲ್ಲಿ ಕೆಲವು ಪ್ರಶ್ನೆಗಳು ಮೂಡುತ್ತಿವೆ.

1.) ನಿಮ್ಮ ಗ್ಯಾರೆಂಟಿಗಳು ಜನರನ್ನು ತಲುಪಿದೆ ಎನ್ನುವ ವಿಶ್ವಾಸವಿಲ್ಲವೇ?

2.)ಮೈಸೂರಿನಲ್ಲಿ ಹೀನಾಯವಾಗಿ ಸೋಲಿಸಿ ನಿಮ್ಮನ್ನ ಕುರ್ಚಿಯಿಂದ ಇಳಿಸಬೇಕು ಎನ್ನುವ ಹುನ್ನಾರದಿಂದ ಸ್ವಪಕ್ಷದವರೇ ಒಳೇಟು ನೀಡುವ ಭಯ ಕಾಡುತ್ತಿದೆಯೇ?

3.) ವರುಣಾದಲ್ಲಿ 60,000 ಲೀಡ್ ಬರದಿದ್ದರೆ ಕುರ್ಚಿಯಿಂದ ಇಳಿಯಬೇಕು ಎಂದು ಹೈಕಮಾಂಡ್ ಈಗಾಗಲೇ ಫರ್ಮಾನು ಹೊರಡಿಸಿದೆಯೇ?

ಕರ್ನಾಟಕದ ಜನತೆ ತಮ್ಮ ಉತ್ತರಕ್ಕಾಗಿ ಕಾಯುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ? ನಿನ್ನೆ ತಮ್ಮ ಬುರುಡೆ ಭಾಷಣ ಕೇಳಲು ಆಸಕ್ತಿ ಇಲ್ಲದೆ ಜಾಗ ಖಾಲಿ ಮಾಡಿದ ವರುಣಾದ ಜನರ ನಡೆ ನೋಡಿದ ಮೇಲೆ ಜನರ ಮನಸ್ಸಿನಲ್ಲಿ ಕೆಲವು ಪ್ರಶ್ನೆಗಳು ಮೂಡುತ್ತಿವೆ.

1. ನಿಮ್ಮ ಗ್ಯಾರಂಟಿಗಳು ಜನರನ್ನು ತಲುಪಿದೆ ಎನ್ನುವ ವಿಶ್ವಾಸವಿಲ್ಲವೇ?.

2.ಮೈಸೂರಿನಲ್ಲಿ ಹೀನಾಯವಾಗಿ ಸೋಲಿಸಿ ನಿಮ್ಮನ್ನ ಕುರ್ಚಿಯಿಂದ ಇಳಿಸಬೇಕು ಎನ್ನುವ ಹುನ್ನಾರದಿಂದ ಸ್ವಪಕ್ಷದವರೇ ಒಳೇಟು ನೀಡುವ ಭಯ ಕಾಡುತ್ತಿದೆಯೇ?.

3. ವರುಣಾದಲ್ಲಿ 60,000 ಲೀಡ್ ಬರದಿದ್ದರೆ ಕುರ್ಚಿಯಿಂದ ಇಳಿಯಬೇಕು ಎಂದು ಹೈಕಮಾಂಡ್ ಈಗಾಗಲೇ ಫರ್ಮಾನು ಹೊರಡಿಸಿದೆಯೇ?.

ಕರ್ನಾಟಕದ ಜನತೆ ತಮ್ಮ ಉತ್ತರಕ್ಕಾಗಿ ಕಾಯುತ್ತಿದ್ದಾರೆ ಎಂದು ಆರ್‌. ಅಶೋಕ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಂವಿಧಾನಿಕ ಬಿಕ್ಕಟ್ಟು ತಪ್ಪಿಸಲು ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ದೆಹಲಿ ಸಿಎಂ