ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಅವರಿಗೆ ನಾಯಕತ್ವ ನಿಭಾಯಿಸುವ ಶಕ್ತಿಯಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಚಿವ ಸಂಪುಟ ವುನರ್‌ರಚನೆಯಲ್ಲಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲವಾಗಿದ್ದಾರೆ. ಅವರಿಗೆ ಟೀಮ್ ಲೀಡ್ ಮಾಡೋ ಕೆಪಾಸಿಟಿ ಇಲ್ಲ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಹೈ-ಕಮಾಂಡ್ ವಿಫಲವಾಗಿದೆ. ಸಚಿವ ಸಂಪುಟದಲ್ಲಿರುವ ಅಸಮರ್ಥರನ್ನು ಮೊದಲೇ ಕೈಬಿಟ್ಟಿದ್ದರೆ ಮುಖ್ಯಮಂತ್ರಿಯವರಿಗೆ ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಕೂಡ್ಲಿಗಿ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಸರಕಾರದ ನಿರ್ಲಕ್ಷ್ಯದಿಂದ ಶೆಣೈ ರಾಜೀನಾಮೆ ನೀಡಿದ್ದಾರೆ. ಇದಕ್ಕೆಲ್ಲಾ ರಾಜ್ಯ ಸರಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ