Publish Date: Sat, 01 Sep 2018 (19:51 IST)
Updated Date: Sat, 01 Sep 2018 (19:53 IST)
ಲೋಕಸಭೆ ಚುನಾವಣೆಗೆ ಸಿದ್ಧತೆಗಳು ಎಲ್ಲ ಪಕ್ಷಗಳೂ ಈಗಿನಿಂದಲೇ ಆರಂಭಿಸಿವೆ. ಏತನ್ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಪ್ಪಳ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಆ ಜಿಲ್ಲೆಯ ಕಾರ್ಯಕರ್ತರು, ಪ್ರಮುಖರು ಒತ್ತಡ ಹೇರುತ್ತಿದ್ದಾರೆ.
ಶಾಸಕರು ಮತ್ತು ಮುಖಂಡರು ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಕೊಪ್ಪಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಗೆಲುವು ನಿರಾಯಾಸವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಮುಖಂಡರಿದ್ದಾರೆ.
ಆದರೆ ಕಾಂಗ್ರೆಸ್ ಮುಖಂಡರ ಮನವಿಯನ್ನು ಸಿದ್ದರಾಮಯ್ಯನವರು ನಯವಾಗಿಯೇ ತಿರಸ್ಕರಿಸಿದ್ದಾರೆ. 1983ರಲ್ಲಿ ಕೊಪ್ಪಳದಿಂದ ಚುನಾವಣೆಗೆ ಸ್ಪರ್ಧಿಸಿ ಸಿದ್ದರಾಮಯ್ಯ ಸೋಲು ಕಂಡಿದ್ದರು.