ಸಿದ್ದರಾಮಯ್ಯನವರೇ 5ವರ್ಷ ಸಿಎಂ, ಈ ಬಗ್ಗೆ ಚರ್ಚೆ ಅನವಶ್ಯಕ: ಜಮೀರ್ ಅಹ್ಮದ್

Sampriya
ಭಾನುವಾರ, 26 ಜನವರಿ 2025 (16:58 IST)
ಕೊಪ್ಪಳ: ಐದು ವರ್ಷವೂ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿಗಳ ಕುರ್ಚಿ ಖಾಲಿಯಿಲ್ಲ. ಹಾಗಾಗಿ ಈ ಸಂಬಂಧ ಚರ್ಚೆ ಅನವಶ್ಯಕ. ಅದಲ್ಲದೆ ಕೆಪಿಸಿಸಿ ಅಧ್ಯಕ್ಷರ ಕುರ್ಚಿಯೂ  ಖಾಲಿಯಿಲ್ಲ. ಈ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವೈಯಕ್ತಿಕ ಎಂದು ಹೇಳಿದರು.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಸ್ವಲ್ಪವೂ ಇಲ್ಲ. ಸಿದ್ದರಾಮಯ್ಯ ಅವರನ್ನು ಅಲುಗಾಡಿಸಿದರೆ ಕಾಂಗ್ರೆಸ್‌ಗೆ ತೊಂದರೆ ಆಗುತ್ತದೆ ಎಂದು ಬಿಜೆಪಿಗರು ಕಿರಿಕಿರಿ ಮಾಡುತ್ತಿದ್ದಾರೆ. ಇದೆಲ್ಲ ನಡೆಯುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ನಡುವಿನ ಜಗಳ ಬಿಜೆಪಿ ಆಂತರಿಕ ವಿಚಾರ. ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಯಾರೂ ಆಹ್ವಾನಿಸಿಲ್ಲ. ಅಷ್ಟಕ್ಕೂ ಅವರು ಬರುವುದೂ ಇಲ್ಲ. ಇದೆಲ್ಲ ಅವರಿಬ್ಬರ ನಾಟಕ. ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳಲು, ಕಾಂಗ್ರೆಸ್‌ನಿಂದ ಆಹ್ವಾನ ಇದೆ ಎಂದು ಶ್ರೀರಾಮುಲು ಹೇಳಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments