Publish Date: Sat, 13 May 2017 (13:40 IST)
Updated Date: Sat, 13 May 2017 (13:42 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್‌ಗೆ ಹೈಕಮಾಂಡ್‌ನಂತಾಗಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಮತ್ತೆ ತಮ್ಮದೇ ಪಕ್ಷದ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಯಾರ ಮಾತನ್ನು ಕೇಳುತ್ತಿಲ್ಲ. ಸಾಧನಾ ಸಮಾವೇಶ ಮಾಡುವುದರ ಬದಲಿಗೆ ಆತ್ಮವಿಮರ್ಶೆ ಸಮಾವೇಶ ಮಾಡಬೇಕಾಗಿತ್ತು ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೆಯೇ ಇದೆ. ಸರಕಾರದ ಸಾಧನೆಯ ಬಗ್ಗೆ ಕೇವಲ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದರೆ ಸಾಲದು. ಅದರ ಬಗ್ಗೆ ಚರ್ಚೆಯಾಗಬೇಕು ಎಂದು ತಿರುಗೇಟು ನೀಡಿದರು.
ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಪಾರದರ್ಶಕ ಅಡಳಿತ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಇದೀಗ ಎಲ್ಲವನ್ನು ಮರೆತಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.