ಮೋದಿಯನ್ನು ಟೀಕಿಸಿದರೆ ದೊಡ್ಡವರಾಗುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ ಸಿದ್ದರಾಮಯ್ಯ: ಬಿಎಸ್‌ವೈ

Sampriya
ಬುಧವಾರ, 27 ಮಾರ್ಚ್ 2024 (19:25 IST)
ಬೆಳಗಾವಿ: ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದರೆ ದೊಡ್ಡ ನಾಯಕರಾಗುತ್ತೇವೆ ಎನ್ನುವ ಭ್ರಮೆ ಸಿದ್ದರಾಮಯ್ಯ ಅವರಿಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇದು ಎಷ್ಟರ ಮಟ್ಟಿಗೆ ಸರಿ ಎಂಬ ಬಗ್ಗೆ ಮುಖ್ಯಮಂತ್ರಿಯಾಗಿ ಅವರೇ ಯೋಚಿಸಬೇಕು ಎಂದರು.

ಈಚೆಗೆ ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಮಾತಿಗೆ ನಗಬೇಕೋ, ಅಳಬೇಕೋ
ಗೊತ್ತಾಗುವುದಿಲ್ಲ. ಮೋದಿ ಬಗ್ಗೆ ಹಗುರವಾಗಿ ಮಾತಾಡಿದರೆ ದೊಡ್ಡವರಾಗುತ್ತೇವೆ ಎನ್ನುವ ಭಾವನೆ ಇದ್ದರೆ ಅದು ಖಂಡಿತ ಸಾಧ್ಯವಿಲ್ಲ. ಇಂತಹ ಮಾತು ಕಡಿಮೆ ಮಾಡಿ, ನಿಮ್ಮ ಸಿ.ಎಂ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಿ ಎಂದರು.

ಮೋದಿ ಹೆಸರು ಹೇಳಿ ಮತ ಕೇಳಿದರೆ ಕಪಾಳಮೋಕ್ಷ ಮಾಡಿ' ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,  ಶಿವರಾಜ್ ತಂಗಡಗಿಗೆ ಇದು ಶೋಭೆ ತರುವುದಿಲ್ಲ. ಇದು ಅತಿರೇಕದ ಪರಮಾವಧಿ. ಹಗುರವಾದ ಮಾತುಗಳನ್ನು ಆಡಿದವರ ಮೇಲೆ ಆ ಪಕ್ಷವೇ ಕ್ರಮ ಕೈಗೊಳ್ಳಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments