ಇವತ್ತೇ ವಿಶ್ವಾಸ ಮತ ಸಾಬೀತು ಪಡಿಸೋಣ- ಸಿಎಂಗೆ ಸಿದ್ದರಾಮಯ್ಯ ಖಡಕ್ ಸೂಚನೆ

ಮಂಗಳವಾರ, 23 ಜುಲೈ 2019 (11:43 IST)
ಬೆಂಗಳೂರು : ವಿಶ್ವಾಸಮತ ಸಾಬೀತು ಪಡಿಸುವ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಕುಮಾರಸ್ವಾಮಿ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ಇವತ್ತೇ ವಿಶ್ವಾಸ ಮತ ಸಾಬೀತು ಪಡಿಸೋಣ. ಸುಪ್ರೀಂ ನಮ್ಮ ಪರವಾಗಿ ಆದೇಶ ನೀಡಿದರೆ ಅದಕ್ಕೆ ನನ್ನದೇನು ತಕರಾರಿಲ್ಲ. ಆದರೆ ಕೋರ್ಟ್ ಆದೇಶ ನಮ್ಮ ಪರವಾಗಿ ಬಾರದೇ ಒಂದು ವೇಳೆ ಇಂದು ವಿಶ್ವಾಸಮತ ಸಾಬೀತು ಮುಂದೂಡಿಕೆಯಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಡಿಸಿಎಂ ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಮೂಲಕ ಸಿಎಂಗೆ ಸಂದೇಶ ರವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
 


ಇಷ್ಟರಲ್ಲೇ ನಾವು ಬಹುಮತ ಸಾಬೀತು ಪಡಿಸಬೇಕಿತ್ತು. ಆದರೆ ಸಿಎಂ ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ. ನಾನು ಸೋಮವಾರ ಬಹುಮತ ಸಾಬೀತು ಮಾಡುತ್ತೇನೆ ಎಂದು ಶುಕ್ರವಾರವೇ ಸದನದಲ್ಲಿ ಸ್ಪಷ್ಟವಾಗಿ ಹೇಳಿದ್ದೆ. ಆದರೆ ನಿನ್ನೆ ಸಿಎಂ ಉಲ್ಟಾ ಹೊಡೆದು ಬಿಟ್ಟಿದ್ದಾರೆ ಎಂದು ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಬಿಜೆಪಿ ಶಾಸಕರಿಗೆ ವಿಶ್ ಮಾಡಿದ ಸಿದ್ದರಾಮಯ್ಯ