Select Your Language

Notifications

webdunia
webdunia
webdunia
webdunia

ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 2 ಅಕ್ಟೋಬರ್ 2015 (14:09 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ್ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಟೌನ್ ಹಾಲ್‌ನಿಂದ ಫ್ರೀಢಂ ಪಾರ್ಕ್‌ವರೆಗೆ ವಾಕಾಥಾನ್ ಹೋಗುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ಗೃಹ ಸಚಿವರಾದ ಕೆ.ಜೆ.ಜಾರ್ಜ್, ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ಸೇರಿದಂತೆ ಸರ್ಕಾರದ ಇತರೆ ಸಂಪುಟ ಸಹೋದ್ಯೋಗಿಗಳು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದ್ದರು. 
 
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮೇಯರ್ ಮಂಜುನಾಥ್ ರೆಡ್ಡಿ, ಕಾಂಗ್ರೆಸ್ ನೇತೃತ್ವದ ಬಿಬಿಎಂಪಿ ಆಡಳಿತದ ಈ ಅವಧಿಯಲ್ಲಿ ಕೇಂದ್ರ ಸರ್ಕಾರದ ಈ ಅಭಿಯಾನವನ್ನು ಯಶಸ್ವಿಗೊಳಿಸಲು ನಿರ್ಧರಿಸಿದ್ದು, ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡಲಿದ್ದೇವೆ. ಇಂದಿನ ಈ ಅಭಿಯಾನಕ್ಕೆ 300ಕ್ಕೂ ಅಧಿಕ ಸಂಘ ಸಂಸ್ಥೆಗಳು ಸಾಥ್ ನೀಡಿದ್ದು, ಎಲ್ಲರಿಗೂ ಧನ್ಯವಾದ ಎಂದರು. 
 
ಇನ್ನು ಕಳೆದ ವರ್ಷ ಇದೇ ದಿನ ಬಿಬಿಎಂಪಿಯಲ್ಲಿ ಬಿಜೆಪಿ ಆಡಳಿತವಿದ್ದ ಕಾರಣ ಶಾಸಕ ಅಶೋಕ್ ಹಾಗೂ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಒಗ್ಗೂಡಿ ಈ ಅಭಿಯಾನಕ್ಕೆ ನಗರದ ಯಡೂಯೂರು ವಾರ್ಡ್‌ನಲ್ಲಿ ಚಾಲನೆ ನೀಡಿದ್ದರು.  

Share this Story:

Follow Webdunia kannada