Publish Date: Fri, 24 Mar 2023 (21:16 IST)
Updated Date: Fri, 24 Mar 2023 (19:18 IST)
ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪತ್ರಿಕಾಹೇಳಿಕೆ ಬಿಡುಗಡೆ ಮಾಡಿದ್ದಾರೆ.ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸದಸ್ಯಸ್ಥಾನದಿಂದ ವಜಾ ಮಾಡಿದ ವಿಚಾರಕ್ಕೆ ಅವರ ಹೇಳಿಕೆ ಬಿಡುಗಡೆ ಮಾಡಿರು ಸಿದ್ದರಾಮಯ್ಯ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ,ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ.ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ದ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ಮಾಡಿದ್ದಾರೆ.