Publish Date: Sun, 18 Sep 2022 (21:11 IST)
Updated Date: Sun, 18 Sep 2022 (21:15 IST)
ನಂಜನಗೂಡಿನ ಬದನವಾಳು ಗ್ರಾಮಕ್ಕೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.ಅಷ್ಟೇ ಅಲ್ಲದೇ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅ. 2ರಂದು ಗಾಂಧಿ ಜಯಂತಿ ಆಚರಣೆಗೆ ರಾಹುಲ್ ಗಾಂಧಿ ಆಗಮನವಾಗ್ತಿರುವುದರಿಂದ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಭಾರತ್ ಜೋಡೋ ಪಾದಯಾತ್ರೆಯ ಬಗ್ಗೆ ವಿವರಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.