Select Your Language

Notifications

webdunia
webdunia
webdunia
webdunia

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಮಂಗಳವಾರ, 21 ಅಕ್ಟೋಬರ್ 2025 (12:16 IST)
ಬೆಂಗಳೂರು: ಸಂವಿಧಾನ  ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ನಮ್ಮ ಕಾಲದಲ್ಲಿ ಕಡಿವಾಣ ಬಿದ್ದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಿದ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

‘ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು.

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ.


Share this Story:

Follow Webdunia kannada

ಮುಂದಿನ ಸುದ್ದಿ

ಹೇಳಿದ ಮಾತು ಕೇಳಿಲ್ಲ ಎಂದು ಭಾರತದ ಮೇಲೆ ಮತ್ತೆ ಸುಂಕಾಸ್ತ್ರ ಪ್ರಯೋಗಿಸಲು ಮುಂದಾದ ಡೊನಾಲ್ಡ್ ಟ್ರಂಪ್