Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ಮಾಡೆಲ್ ಫಾಲೋ ಮಾಡ್ತಾರಂತೆ ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 25 ಸೆಪ್ಟಂಬರ್ 2024 (13:21 IST)
ಬೆಂಗಳೂರು: ಮುಡಾ ಹಗರಣದಲ್ಲಿಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾದರೂ ಅವರು ದೆಹಲಿ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಮಾಡೆಲ್ ಫಾಲೋ ಮಾಡಲಿದ್ದಾರಂತೆ. ಈ ಬಗ್ಗೆ ಸತೀಶ್ ಜಾರಕಿಹೊಳಿ ಸುಳಿವು ನೀಡಿದ್ದಾರೆ.

ಸಿಎಂ ವಿರುದ್ಧ ಕೇಸ್ ದಾಖಲಿಸಿ, ಅವರನ್ನು ಬಂಧಿಸಬೇಕಾದ ಪರಿಸ್ಥಿತಿ ಬಂದರೂ ಅವರು ರಾಜೀನಾಮೆ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಅಂತಹ ಸಂದರ್ಭ ಬಂದಾಗ ಸಿದ್ದರಾಮಯ್ಯ ಕೂಡಾ ಕೇಜ್ರಿವಾಲ್ ರೀತಿ ಮಾಡ್ತಾರಾ ಎಂದು ಪತ್ರಕರ್ತರು ಸತೀಶ್ ಜಾರಕಿಹೊಳಿಗೆ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅವರು ‘ಕೇಜ್ರಿವಾಲ್ ಮಾಡೆಲ್ ಫಾಲೋ ಮಾಡಬಹುದೇನೋ. ಅದರ ಬಗ್ಗೆ ಏನೂ ಗೊತ್ತಿಲ್ಲ. ಸದ್ಯಕ್ಕೆ ರಾಜೀನಾಮೆ ಪ್ರಶ್ನೆ ಎಲ್ಲಾ ಬರಲ್ಲ. ಇನ್ನೂ ಎಫ್ ಐಆರ್ ದಾಖಲಾಗಬೇಕು, ತನಿಖೆಯಾಗಬೇಕು, ಈಗಲೇ ಏನೂ ಹೇಳಕ್ಕಾಗಲ್ಲ’ ಎಂದಿದ್ದಾರೆ.

ಈ ಮೊದಲು ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಒಳಗೊಳಗೇ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾಗ ಸತೀಶ್ ಜಾರಕಿಹೊಳಿ ಇದರ ನೇತೃತ್ವ ವಹಿಸಿದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಅವರು ಸಿದ್ದರಾಮಯ್ಯನವರ ಬಗ್ಗೆ ನೀಡಿರುವ ಹೇಳಿಕೆ ಮಹತ್ವದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments