Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಆಶೀರ್ವಾದವಿರಬಹುದು, ಸಿಬಿಐ, ಕೋರ್ಟ್ ಆಶೀರ್ವಾದವಿಲ್ಲ

N Ravikumar

Krishnaveni K

ಬೆಂಗಳೂರು , ಶುಕ್ರವಾರ, 18 ಅಕ್ಟೋಬರ್ 2024 (20:16 IST)
ಬೆಂಗಳೂರು: ಸಿದ್ದರಾಮಯ್ಯರಿಗೆ ಚಾಮುಂಡೇಶ್ವರಿ ಆಶೀರ್ವಾದ ಇರಬಹುದು. ಆದರೆ, ಕೋರ್ಟಿನ, ಲೋಕಾಯುಕ್ತದ, ಸಿಬಿಐ ಆಶೀರ್ವಾದ ಇದೆಯೇ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕೆಂದು ನಾವು ಕೇಳುತ್ತಿದ್ದೇವೆ. ಸಿದ್ದರಾಮಯ್ಯ ಅವರು 100ಕ್ಕೆ ನೂರು ತಪ್ಪು ಮಾಡಿದ್ದು ಎಲ್ಲರಿಗೂ ಗೊತ್ತಾಗುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ನಾನೇನೂ ತಪ್ಪು ಮಾಡಿಲ್ಲ. ಚಾಮುಂಡೇಶ್ವರಿ ಆಶೀರ್ವಾದ ನನಗಿದೆ ಅಂತ ಹೇಳುತ್ತಿದ್ದಾರೆ ಎಂದರು.

ಕೋರ್ಟಿನ ಆದೇಶದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮತ್ತು ಕಾನೂನಿನ ಪರಿಧಿಯಲ್ಲೂ ಸಿದ್ದರಾಮಯ್ಯ ಅವರು 100ಕ್ಕೆ ನೂರು ತಪ್ಪು ಮಾಡಿ ಸಿಕ್ಕಿ ಹಾಕಿಕೊಂಡಿದ್ದು ಜಗಜ್ಜಾಹೀರಾಗಿದೆ. ಇಂಥದ್ದೇ ಪ್ರಕರಣದಲ್ಲಿ ಬಿಜೆಪಿ ನಾಯಕರು ಸಿಕ್ಕಿ ಹಾಕಿಕೊಂಡಿದ್ದರೆ ಸಿದ್ದರಾಮಯ್ಯ ಅವರು ಯಾವ ರೀತಿ ಮಾತಿನ ದಾಳಿ ಮಾಡುತ್ತಿದ್ದರು ಎಂಬುದನ್ನು ಜನರು ಕಲ್ಪನೆ ಮಾಡುವುದಕ್ಕೂ ಅಸಾಧ್ಯ ಎಂದು ತಿಳಿಸಿದರು.

ಮೂಲ ದಾಖಲಾತಿ ಸಂಗ್ರಹಿಸಲು ಮೈಸೂರು ಮುಡಾ ಕಚೇರಿ ಮೇಲೆ ಇ.ಡಿ. ದಾಳಿ ಆಗಿದೆ. ಒಂದು ಕಡೆ ಇ.ಡಿ. ದಾಳಿ ಆಗಿದ್ದರೆ ಮತ್ತೊಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಎರಡೆರಡು ಕೋರ್ಟುಗಳು ಸಿದ್ದರಾಮಯ್ಯ ಅವರು ತಪ್ಪು ಮಾಡಿದ್ದಾರೆಂದು ತೀರ್ಪು ಕೊಟ್ಟಿವೆ ಎಂದು ವಿವರಿಸಿದರು.
 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಮುಡಾ ಮೇಲೆ ಇಡಿ ರೇಡ್ ಬೆನ್ನಲ್ಲೇ ಸಿಬಿಐ ತನಿಖೆಗೆ ಪಟ್ಟು ಹಿಡಿದ ಬಿಜೆಪಿ