Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಕ್ಷಮೆ ಕೇಳಲಿ ಎಂದ ಬಿ.ಎಸ್.ವೈ

ಸಿದ್ದರಾಮಯ್ಯ ಕ್ಷಮೆ ಕೇಳಲಿ ಎಂದ ಬಿ.ಎಸ್.ವೈ
ಗದಗ , ಗುರುವಾರ, 25 ಅಕ್ಟೋಬರ್ 2018 (16:42 IST)
ಗದಗಿನ ತೋಂಟದಾರ್ಯ ಮಠದ 19ನೇ ಪಿಠಾಧಿಪತಿಗಳಾದ ಸಿದ್ಧಲಿಂಗ ಸ್ವಾಮೀಜಿಗಳು ನಿಧನರಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗದಗನ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದರು.

ಗದಗನ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು,
ಶ್ರೀಗಳ ಗದ್ದುಗೆಗೆ ನಮಸ್ಕರಿಸಿ ಪುಷ್ಪಾರ್ಚನೆ ಮಾಡಿದರು.

ಉಪ ಚುನಾವಣಾ ಕುರಿತು ಮಾತನಾಡಿದ ಅವರು, 5 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು. ಈ ಸಂದರ್ಭದಲ್ಲಿ ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ 420 ಪದ ಬಳಕೆ ವಿಚಾರ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವ್ರ ಬಾಯಲ್ಲಿ ಇಂಥ ಮಾತು ನಿರೀಕ್ಷೆ ಮಾಡಿರಲಿಲ್ಲ. ರಾಮುಲು ವಿರುದ್ಧ 420 ಪದ ಬಳಕೆ ಇಡೀ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದಂತಾಗಿದೆ.‌ ಮೊದಲು ಅವರು ಕ್ಷಮೆ ಕೇಳಲಿ ಎಂದು ಆಗ್ರಹ ಮಾಡಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಬರ ನಿರ್ವಹಣೆಯಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ಸಚಿವ ಗರಂ