Publish Date: Sat, 26 Oct 2019 (11:01 IST)
Updated Date: Sat, 26 Oct 2019 (11:02 IST)
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ಮರಳಲಿದ್ದಾರೆ.
ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭರ್ಜರಿ ಸಿದ್ದತೆ ಮಾಡಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾತ್ರ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬರುವುದಿಲ್ಲ ಎಂಬುದಾಗಿ ತಿಳಿದುಬಂದಿದೆ.
ಹೌದು. ಗದಗದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಿದ್ದರಾಮಯ್ಯ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಅವರು ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬರುವುದಿಲ್ಲ ಎನ್ನಲಾಗಿದೆ.