Webdunia - Bharat's app for daily news and videos

Install App

77ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿದ್ದರಾಮಯ್ಯ: ಗಮನ ಸೆಳೆಯುತ್ತಿದೆ ಡಿಕೆ ಶಿವಕುಮಾರ್ ಶುಭಾಶಯ

Sampriya
ಭಾನುವಾರ, 3 ಆಗಸ್ಟ್ 2025 (13:49 IST)
Photo Credit X
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 77ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆ ಅವರಿಗೆ ರಾಜಕೀಯ ಮುಖಂಡರು ಸೇರಿದಂತೆ  ಅನೇಕರು ಸಾಮಾಜಿಕ ಜಾಲತಾಣದಲ್ಲಿ ಶುಭಹಾರೈಸುತ್ತಿದ್ದಾರೆ. 

ಇದೀಗ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಾರೈಸಿದ ರೀತಿ ಗಮನ ಸೆಳೆಯುತ್ತಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ನಡುವೆ ಪೈಪೋಟಿ ಜೋರಾಗಿತ್ತು. 

ಕರ್ನಾಟಕ ಸಿಎಂ ಕುರ್ಚಿ ಬದಲಾವಣೆ ಸಂಬಂಧ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಈ ವಿಚಾರವಾಗಿ ಹೈಕಮಾಂಡ್ ಅನ್ನು ಭೇಟಿಯಾಗಿ ಸುದೀರ್ಘ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಆದರೆ ಈಚೆಗೆ ಕಾಂಗ್ರೆಸ್ ಹೈಕಮಾಂಡ್ ಜತೆ ರಾಜ್ಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯಗೆ ಶಾಸಕರ ಬೆಂಬಲವಿದ್ದು, ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲವಿಲ್ಲ ಎಂಬ ವಿಚಾರ ಹೊರಬಿದ್ದಿತ್ತು. ಇದನ್ನು ಸಿದ್ದರಾಮಯ್ಯನವರೇ ಬಹಿರಂಗವಾಗಿ ಹೇಳಿದ್ದರು. 

ಹೈಕಮಾಂಡ್‌ ಭೇಟಿ ಬಳಿಕ ಡಿಕೆ ಶಿವಕುಮಾರ್ ಅವರೇ ಕರ್ನಾಟಕದಲ್ಲಿ ಸಿಎಂ ಬದಲಾವಣೆಯಿಲ್ಲ, ಸುರ್ಜೇವಾಲೇ ಅವರೇ ಈ ಸಂಬಂಧ ಹೇಳಿದ್ಮೇಲೆ ಮತ್ತೇನಿದೆ ಎಂದು ಎಲ್ಲ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದರು. 

ಆದರೆ ಇಂದು ಕೂಡಾ ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಮಾತುಕತೆಯಿದೆ. ಈ ಎಲ್ಲ ಬೆಳವಣಿಗೆ ಮಧ್ಯೆ ಸಿದ್ದರಾಮಯ್ಯ ಬರ್ತಡೇ ದಿನ ಡಿಕೆ ಶಿವಕುಮಾರ್ ಅವರ ಶುಭಾಶಯ ಗಮನ ಸೆಳೆಯುತ್ತದೆ. 

ಸಾಮಾಜಿಕ ಜಾಲತಾಣ  ಎಕ್ಸ್‌ನಲ್ಲಿ ಸಿದ್ದರಾಮಯ್ಯಗೆ ಶುಭಕೋರಿದ ಡಿಕೆ ಶಿವಕುಮಾರ್ ಅವರು,  ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ. 

ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ಮುಂದಿನ ಸುದ್ದಿ
Show comments