ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿವಾದ ಮತ್ತೆ ಹೊತ್ತಿಕೊಂಡಿದ್ದು ಐದು ವರ್ಷ ನೀವೇ ಸಿಎಂ ಆಗಿ ಮುಂದುವರಿಯುತ್ತೀರಾ ಎಂದು ಪತ್ರಕರ್ತರು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಎಂ ಉತ್ತರವೇನು ಗೊತ್ತಾ?
ಮೊನ್ನೆಯಷ್ಟೇ ಸಿಎಂ ಪುತ್ರ ಯತೀಂದ್ರ ನಮ್ಮ ತಂದೆಯವರೇ ಐದು ವರ್ಷ ಸಿಎಂ ಆಗುತ್ತಾರೆ ಎಂದು ಮತ್ತೆ ವಿವಾದದ ಕಿಡಿ ಹೊತ್ತಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಪುತ್ರನಿಗೆ ಬುಲಾವ್ ನೀಡಿ ವಾರ್ನಿಂಗ್ ಕೊಟ್ಟಿದ್ದರು.
ಆದರೆ ಯತೀಂದ್ರ ಹೇಳಿಕೆ ಡಿಕೆಶಿ ಬಣದ ಅಸಮಾಧಾನಕ್ಕೆ ಕಾರಣವಾಗಿದೆ. ಇಂದು ಮಾಧ್ಯಮಗಳು ಸಿದ್ದರಾಮಯ್ಯನವರಿಗೆ ನೀವೇ ಐದು ವರ್ಷ ಮುಂದುವರಿಯುತ್ತೀರಾ ಸಾರ್ ಎಂದು ಪ್ರಶ್ನೆ ಮಾಡಿದೆ. ಇದಕ್ಕೆ ಉತ್ತರಿಸಿದ ಅವರು ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಅದೇ ಅಂತಿಮ ಎಂದಿದ್ದಾರೆ.
ಇನ್ನು, ಶಾಸಕಾಂಗ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಸುದ್ದಿಯಾಗಿದೆ. ಈ ಬಗ್ಗೆ ಕೇಳಿದ್ದಕ್ಕೆ ಅದರ ಬಗ್ಗೆ ಏನೂ ಚರ್ಚೆಯಾಗಿಲ್ಲ ಎಂದಿದ್ದಾರೆ. ಇನ್ನು ಶಾಸಕಾಂಗ ಸಭೆಯಲ್ಲಿ ನಡೆದ ಎಲ್ಲಾ ವಿಚಾರಗಳನ್ನು ಇಲ್ಲಿ ಹೇಳಕ್ಕಾಗಲ್ಲ ಎಂದಿದ್ದಾರೆ.