Publish Date: Tue, 17 Mar 2026 (09:24 IST)
Updated Date: Tue, 17 Mar 2026 (09:27 IST)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಂಪುಟ ಪುನರಾರಚನೆ, ನಾಯಕತ್ವ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ನಿನ್ನೆ ರಾತ್ರಿ ಕೇವಲ 14 ಸಚಿವರಿಗೆ ಡಿನ್ನರ್ ಮೀಟಿಂಗ್ ಗೆ ಆಹ್ವಾನ ನೀಡಲಾಗಿತ್ತು.
ಕೆಲವು ದಿನಗಳ ಹಿಂದೆ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಎಲ್ಲಾ ಶಾಸಕರು, ಸಚಿವರಿಗೆ ಔತಣ ಕೂಟ ಏರ್ಪಡಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಬಳಗದವರಿಗೆ ಡಿನ್ನರ್ ಕೂಟ ಆಯೋಜಿಸಿದ್ದಾರೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಿನ್ನೆ ರಾತ್ರಿ ಔತಣ ಕೂಟ ನಡೆದಿದೆ. ಈ ಔತಣ ಕೂಟದಲ್ಲಿ ಒಟ್ಟು 14 ಸಚಿವರು ಭಾಗಿಯಾಗಿದ್ದಾರೆ. ಈ ಔತಣಕೂಟದಲ್ಲಿ ಭೈರತಿ ಸುರೇಶ್, ಜಮೀರ್ ಅಹ್ಮದ್, ಕೃಷ್ಣಭೈರೇಗೌಡ, ರಾಮಲಿಂಗಾ ರೆಡ್ಡಿ, ಕೆಎಚ್ ಮುನಿಯಪ್ಪ, ಚೆಲುವರಾಯಸ್ವಾಮಿ, ಎಸ್ಎಸ್ ಮಲ್ಲಿಕಾರ್ಜುನ್, ಈಶ್ವರ ಖಂಡ್ರೆ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಎಂಬಿ ಪಾಟೀಲ್, ದಿನೇಶ್ ಗುಂಡೂರಾವ್,ಭೋಸುರಾಜ್ ಭಾಗಿಯಾಗಿದ್ದಾರೆ.
ಈ ಸಭೆಯಲ್ಲಿ ಸಂಪುಟ ಪುನರಾರಚನೆ, ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರ ಚರ್ಚೆಯಾಗಿದೆ ಎನ್ನಲಾಗಿದೆ. ಆದರೆ ಕೇವಲ 14 ಸಚಿವರಿಗೆ ಮಾತ್ರ ಆಹ್ವಾನ ನೀಡಿದ್ದು ಕುತೂಹಲಕ್ಕೆ ಕಾರಣವಾಗಿದೆ.