Select Your Language

Notifications

webdunia
webdunia
webdunia
webdunia

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

Siddaramaiah
ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ನಾನು ಜಾತಿ ಧರ್ಮ ನೋಡಲ್ಲ. ಕೇಂದ್ರ ಸರ್ಕಾರ ನಮಗೆ ಅಭಿವೃದ್ಧಿ ವಿಚಾರದಲ್ಲಿ ದ್ರೋಹ ಮಾಡಿದೆ ಎನ್ನುವುದು ಸುಳ್ಳಾದ್ರೆ ಮುಂದೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಭೀಷ್ಮ ಪ್ರತಿಜ್ಞೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಅಭಿವೃದ್ಧಿ ವಿಚಾರ ಬಂದಾಗ ನಾವು ಜಾತಿ-ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲರೂ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ನಮಗೆ ಮಾಡಿರುವ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತುವುದಿಲ್ಲ. ಭಾಷಣವನ್ನೂ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಪ್ರತಿಜ್ಞೆ ಮಾಡಿದ್ದಾರೆ.

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಬಹಿರಂಗ ಚರ್ಚೆಗೆ ಬರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ