Select Your Language

Notifications

webdunia
webdunia
webdunia
webdunia

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

Siddaramaiah

Krishnaveni K

ಬೆಂಗಳೂರು , ಶುಕ್ರವಾರ, 20 ಫೆಬ್ರವರಿ 2026 (20:32 IST)
ಬೆಂಗಳೂರು: ನನ್ನ ಹಾದಿ ಎಂದಿಗೂ ಹೂವಿನ ಹಾಸಿಗೆಯಾಗಿರಲಿಲ್ಲ. ಕೊನೆ ಉಸಿರುವವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸಿಎಂ ಸಿದ್ದರಾಮಯ್ಯ ಸಂಚಲನ ಮೂಡಿಸಿದ್ದಾರೆ.

ಒಂದೆಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್ ಆಗಿದ್ದರೆ ಇನ್ನೊಂದೆಡೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಕುರಿತು ಈ ಪೋಸ್ಟ್ ಮಾಡಿದ್ದಾರೆ.

‘ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು - ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ.

ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವ ವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವ ವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ’ ಎಂದಿದ್ದಾರೆ.

ಅವರು ಸಾಂದರ್ಭಿಕವಾಗಿ ಈ ಪೋಸ್ಟ್ ಮಾಡಿದ್ದರೂ ಈಗಿನ ರಾಜಕೀಯ ವಿದ್ಯಮಾನಗಳಿಗೆ ಹೋಲಿಸಿ ಅನೇಕರು ಇದಕ್ಕೆ ನಾನಾ ಅರ್ಥ ಕಲ್ಪಿಸುತ್ತಿದ್ದಾರೆ. ಇನ್ನೊಂದು ಪೋಸ್ಟ್ ಮಾಡಿರುವ ಅವರು ಕುರಿ ಕಾಯುವವನು ಸಿಎಂ ಪಟ್ಟಕ್ಕೇರಿರುವುದೇ ಕೆಲವರ ಕಣ್ಣು ಕೆಂಪಗಾಗಿಸಿದೆ ಎಂದಿದ್ದಾರೆ. ಇನ್ನೊಂದು ಸಂದೇಶ ಬರೆದುಕೊಂಡಿರುವ ಅವರು ರಾಹುಲ್ ಗಾಂಧಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಲು ಯಾವಾಗಿಂದ ಶುರು ಮಾಡಿದರೋ ಆವಾಗಿನಿಂದ ಅವರ ವಿರುದ್ಧವೂ ಸಂಚು ನಡೆಯುತ್ತಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video