ಇಂದು ದೇಶದಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪ್ರಾರ್ಥನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ತಲೆಗೆ ಟೋಪಿ ಧರಿಸಿ ಸಿದ್ದರಾಮಯ್ಯ ಅಲ್ಲಾನನ್ನು ಸ್ಮರಿಸಿದರು. ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು. ಎಲ್ಲರೂ ಅಲ್ಲಾನಲ್ಲಿ ಪ್ರಾರ್ಥನೆ ಮಾಡಬೇಕು. ನಾನೂ ಕೂಡಾ ದೇಶದಲ್ಲಿ ಶಾಂತಿ ಕಾಪಾಡುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು. ಈದ್ಗಾ ಮೈದಾನದಲ್ಲಿಪ್ರಾರ್ಥನೆ ಸಲ್ಲಿಸಿದ ನಂತರ ಸಿದ್ದರಾಮಯ್ಯ ದೇವಾಲಯಕ್ಕೆ ಭೇಟಿ ನೀಡಿದರು. ಚಾಮರಾಜಪೇಟೆ ಮಲೆಮಹದೇಶ್ವರ ದೇಗುಲಕ್ಕೆ ಭೇಟಿ ನೀಡಿ, ಮಲೆಮಹದೇಶ್ವರನಿಗೆ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯಗೆ ಶಾಸಕ ಜಮೀರ್ ಅಹ್ಮದ್ ಖಾನ್, ಪುತ್ರ ಸಾಥ್ ನೀಡಿದರು. ದೇವಾಲಯದಲ್ಲಿ ಪುರೋಹಿತರು ಸಿದ್ದು, ಜಮೀರ್ ಹಣೆಗೆ ಕೇಸರಿ ಬೊಟ್ಟು ಹಚ್ಚಿದರು.