Publish Date: Wed, 05 May 2021 (12:18 IST)
Updated Date: Wed, 05 May 2021 (12:20 IST)
ಬೆಂಗಳೂರು : ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊವಿಡ್ ನ್ನ ಏಕೆ ಬಳಸಿಕೊಳ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ರಾಜ್ಯದ ಕೊರೊನಾ ಸೋಂಕಿತರಿಗೆ ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊಡಿ ಎಂದು ಪ್ರಧಾನಿಯನ್ನು ಬೇಡುತ್ತಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನ ಬೇಡ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಏಕೆ? ಎಂದು ಟ್ವೀಟರ್ ಮೂಲಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.