Select Your Language

Notifications

webdunia
webdunia
webdunia
Friday, 18 April 2025
webdunia

ಸಿದ್ದರಾಮನಹುಂಡಿಗೆ ಗಂಟು- ಮೂಟೆ ಕಟ್ಟುತ್ತಿರುವ ಸಿದ್ದರಾಮಯ್ಯ- ಆರ್.ಅಶೋಕ್

ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 8 ಡಿಸೆಂಬರ್ 2017 (08:57 IST)
ಗುಜರಾತ್ ಚುನಾವಣೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಟು ಮೂಟೆ ಕಟ್ಟಿಕೊಂಡು ಸಿದ್ದರಾಮನಹುಂಡಿಗೆ ಹೋಗುತ್ತಾರೆ. ಬೆಂಗಳೂರಿಗೆ ಬರಲ್ಲ ಎಂದು ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಲೇವಡಿ ಮಾಡಿದ್ದಾರೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸೋಲಿನ ಭೀತಿ ಕಾಡುತ್ತಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರ ಆಡಳಿತದಲ್ಲಿದ್ದರೆ ಅಭಿವೃದ್ಧಿಗೆ ಅನುಕೂಲವಾಗಲಿದೆ. ಆದ್ದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳಲ್ಲಿ ಕೋಟ್ಯಾಂತರ ರೂಪಾಯಿ ಅನುದಾನವನ್ನು ರಾಜ್ಯಕ್ಕೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಕೆ ಮಾಡದೇ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ- ಮನೆ ಮನೆ ಪ್ರಚಾರ