Select Your Language

Notifications

webdunia
webdunia
webdunia
webdunia

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Siddaramaiah
ಬೆಂಗಳೂರು: ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಹೊಣೆ ಹೊತ್ತು ಪೊಲೀಸರನ್ನು ಸಸ್ಪೆಂಡ್ ಮಾಡುವುದಲ್ಲ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ವಿಪಕ್ಷಗಳು ಹೇಳುತ್ತಿವೆ ಎಂದಿದ್ದಕ್ಕೆ ಸಿದ್ದು ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?

ಆರ್ ಸಿಬಿ ಆಟಗಾರರನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿ ಚಿನ್ನಸ್ವಾಮಿ ಮೈದಾನ ಬಳಿ ದುರಂತವೇ ನಡೆದು ಹೋಗಿದೆ. ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಸಿಎಂ ಸಿದ್ದರಾಮಯ್ಯ ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿದ್ದ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರು ಘಟನೆಯ ಹೊಣೆ ಹೊತ್ತು ಪೊಲೀಸರನ್ನು ಸಸ್ಪೆಂಡ್ ಮಾಡುವುದಲ್ಲ. ಸಿಎಂ ಮತ್ತು ಡಿಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದಿದ್ದರು.

ಇದರ ಬಗ್ಗೆ ಇಂದು ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ‘ಬಿಜೆಪಿಯವರು ರಾಜಕೀಯಕ್ಕೋಸ್ಕರ ಮಾತನಾಡುತ್ತಾರೆ. ನಾನು ರಾಜಕೀಯ ಮಾಡಕ್ಕೆ ಹೋಗಲ್ಲ ಈಗ. ಮೇಲ್ನೋಟಕ್ಕೆ ಯಾರು ಜವಾಬ್ಧಾರರಿದ್ದಾರೆ, ಯಾರು ಜವಾಬ್ಧಾರಿಯನ್ನು ನಿಭಾಯಿಸಿಲ್ಲ ಅವರ ಮೇಲೆ ಕ್ರಮ ಕೈಗೊಂಡಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹೆಚ್ಚು ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ