Webdunia - Bharat's app for daily news and videos

Install App

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

ಕೃಷ್ಣವೇಣಿ ಕೆ
ಬುಧವಾರ, 27 ಮೇ 2026 (12:44 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೀರಾ ಎಂದು ಮಾಧ್ಯಮಗಳು ಇಂದು ಪ್ರಶ್ನೆ ಮಾಡಿದಾಗ ಸಿದ್ದರಾಮಯ್ಯನವರು ನೀಡಿದ ಪ್ರತಿಕ್ರಿಯೆ ಅಚ್ಚರಿ ಹುಟ್ಟಿಸುವಂತಿದೆ.

ನಿನ್ನೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸುದೀರ್ಘ ಮಾತುಕತೆ ನಡೆಸಿದ ನಂತರ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ದಟ್ಟವಾಗಿದೆ. ಇದರ ನಡುವೆ ಇಂದು ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

ಸಿಎಂ ಬದಲಾವಣೆ ವಿಚಾರ ಸುದ್ದಿಯಲ್ಲಿರುವಾಗಲೇ ಇಂದು ಜವಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಈ ವೇಳೆ ಮಾಧ್ಯಮಗಳು ಅವರನ್ನು ಸುತ್ತುವರೆದಿದ್ದು ರಾಜೀನಾಮೆ ನೀಡ್ತೀರಾ ಸಾರ್ ಎಂದು ಪ್ರಶ್ನೆ ಮಾಡಿವೆ.

ಇದಕ್ಕೆ ಉತ್ತರಿಸಿರುವ ಅವರು ‘ಎಲ್ಲದಕ್ಕೂ ನಾಳೆ ಉತ್ತರ ನೀಡುತ್ತೇನೆ. ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ ಮುಕ್ತವಾಗಿ ಮಾತನಾಡುತ್ತೇನೆ’ ಎಂದಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಹುಟ್ಟಿಸಿದೆ. ವಿಶೇಷವೆಂದರೆ ಇದುವರೆಗೆ ಇಂಥಾ ಪ್ರಶ್ನೆ ಕೇಳಿದಾಗ ಅವರು ನಾನು ರಾಜೀನಾಮೆ ನೀಡಲ್ಲ ಎಂದೇ ಹೇಳುತ್ತಿದ್ದರು. ಆದರೆ ಈ ಬಾರಿ ಎಲ್ಲಾ ನಾಳೆ ಹೇಳುವುದಾಗಿ ಹೇಳಿರುವುದು ಕುತೂಹಲ ಹೆಚ್ಚಿಸಿದೆ. ಹೀಗಾಗಿ ನಾಳೆ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ತೀರ್ಮಾನವಾಗುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments