Publish Date: Tue, 03 Dec 2019 (11:37 IST)
Updated Date: Tue, 03 Dec 2019 (11:39 IST)
ಮೈಸೂರು : ಸಿದ್ಧರಾಮಯ್ಯ ಕಾಂಗ್ರೆಸ್ ವೈಟ್ ವಾಷ್ ಮಾಡ್ತಾರೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸ್ ಪ್ರಸಾದ್ ಗೆ ಇನ್ನೂ ಬುದ್ಧಿ ಬಂದಿಲ್ಲ. ನಂಜನಗೂಡು ಉಪಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದು ಯಾರು? ಬಿಜೆಪಿಯಿಂದ ಸ್ಪರ್ಧೆ ಮಾಡಿ ನಂಜನಗೂಡಿನಲ್ಲಿ ಸೋತರು. ಆದರೂ ಅವರಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಕಿಡಿಕಾರಿದ್ದಾರೆ.
ಹಾಗೇ ಮುಂಬೈ ದುಡ್ಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ವೋಟು ಎಂಬ ತಮ್ಮ ಹೇಳಿಕೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಬಿಜೆಪಿಯವರು ಸಿಕ್ಕಾಪಟ್ಟೆ ದುಡ್ಡು ಕೊಟ್ಟಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಹಣ ಖರ್ಚು ಮಾಡ್ತಿದ್ದಾರೆ. ಆದರೆ ಜನರ ಮನಸ್ಸು ಈ ಹಣಕ್ಕೆ ಕರಗುವುದಿಲ್ಲ. ಹೀಗಾಗಿ ಬಿಜೆಪಿ ದುಡ್ಡು, ಕಾಂಗ್ರೆಸ್ ಗೆ ವೋಟು ಎಂದಿದ್ದೇನೆ ಎಂದು ತಿಳಿಸಿದ್ದಾರೆ.