ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಇತರ ಸಚಿವರ ವಿರುದ್ಧ ಸಿದ್ದರಾಮಯ್ಯ ಫುಲ್‌ಗರಂ: ಯಾಕೆ ಗೊತ್ತಾ

Sampriya
ಶನಿವಾರ, 31 ಮೇ 2025 (14:39 IST)
Photo Courtesy X
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಸಚಿವರ ವಿರುದ್ಧ ಗರಂ ಆದ ಘಟನೆ ಶನಿವಾರ ನಡೆದಿದೆ. 

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಎರಡನೇ ದಿನ ಸಿದ್ದರಾಮಯ್ಯ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಗೈರಾಗಿದ್ದ ಡಿ.ಕೆ.ಶಿವಕುಮಾರ್‌ ಮತ್ತು ಇತರ ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದರು.

ಸಭೆ ಪ್ರಾರಂಭಕ್ಕೂ ಮುನ್ನ ಅಧಿಕಾರಿಗಳು ಸಚಿವರನ್ನ ಸ್ವಾಗತ ಮಾಡುತ್ತಿದ್ದರು. ಈ ವೇಳೆ ಹಲವು ಸಚಿವರು ಸಭೆಗೆ ಇನ್ನು ಆಗಮಿಸಿರಲಿಲ್ಲ. ಇದಕ್ಕೆ ಸಿಟ್ಟಾದ ಸಿಎಂ, ಯಾರ‍್ಯಾರು ಸಭೆಗೆ ಬಂದಿಲ್ಲವೋ ಅವರ ಹೆಸರು ಗುರುತು ಹಾಕಿಕೊಳ್ಳುತ್ತೇನೆ ಎಂದು ಕಿಡಿಕಾರಿದರು.

ಇದಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡರು ನೀವೇನು ದಂಡ ಹಾಕೋದಿಲ್ಲ ಅಲ್ವಾ, ಬಿಡಿ ಸರ್ ಎಂದು ಹೇಳಿದರು.  ಇದಕ್ಕೆ ಮತ್ತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಇದು ಮುಖ್ಯವಾದ ಮೀಟಿಂಗ್ ಅಲ್ವಾ? ಎಲ್ಲರೂ ಸರಿಯಾದ ಸಮಯಕ್ಕೆ ಬರಬೇಕು. ಸಭೆಗೆ ಬಾರದೇ ಹೋದ್ರೆ ಹೇಗೆ? ಎಂದು ಪ್ರಶ್ನಿಸಿದರು. 

ಸಿದ್ದರಾಮಯ್ಯ ಅವರು ತಮ್ಮ ಪಕ್ಕದಲ್ಲೇ ಇದ್ದ ಖಾಲಿ ಕುರ್ಚಿಯ ಕಡೆ ಕೈ ತೋರಿಸಿ, ನಮ್ಮ ಡಿಸಿಎಂ ಅವರು ಇನ್ನೂ ಸಭೆಗೆ ಬಂದಿಲ್ಲ ಎಂದು ಡಿ.ಕೆ ಶಿವಕುಮಾರ್ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments