Select Your Language

Notifications

webdunia
webdunia
webdunia
webdunia

ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಕೈವಾಡ: ಸಿಎಂ ರಾಜೀನಾಮೆಗೆ ಆರ್‌.ಅಶೋಕ್ ಆಗ್ರಹ

Valmiki Corporation scam

Sampriya

ಕೋಲಾರ , ಶುಕ್ರವಾರ, 28 ಜೂನ್ 2024 (18:31 IST)
Photo Courtesy X
ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದರೆ, ಸಿಎಂ ಸಿದ್ದರಾಮಯ್ಯ ಅವರು ಶೇ  80ರಷ್ಟು ತಿಂದಿದ್ದು, ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಸ್ಥಗಿತ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ  ಬಿಜೆಪಿ ಹಾಗೂ ಜನತಾದಳದ ವತಿಯಿಂದ ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ, ಎಚ್ಚರ ತಪ್ಪಿದರೆ ಆಪತ್ತು ಗ್ಯಾರಂಟಿ