ಬೆಂಗಳೂರು: ಮುಂದಿನ ದಿನಗಳಲ್ಲಿ ಶಾಲಾ ಪಠ್ಯದಲ್ಲಿ ರಾಮಾಯಣವನ್ನು ಸೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.
SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್‌ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ.