ಮೈಸೂರು: ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಈಗಾಗಲೇ ವೇದಿಕೆ ಸಿದ್ಧವಾಗಿದ್ದು, ಹಾಗಾಗಿ ಅವರ ವರ್ಗಾವಣೆ ಖಚಿತ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಜ್ಜು ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಜ್ಯಕ್ಕೆ ಭೇಟಿ ನೀಡಿರುವ ಅವರು ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸದ್ದು, ಇದೀಗ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕರಲ್ಲಿ ವಿಶ್ವಾಸ ಉಳಿದಿಲ್ಲ ಲ್ಲ ಎಂದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ಕಳೆದ ಒಂದೂವರೆ ವರ್ಷದಿಂದ ಪಕ್ಷದ ಸಂಘಟನೆ ಮಾಡಿದ್ದೇನೆ.ಈ ಹುದ್ದೆಯಲ್ಲಿ ನನ್ನನ್ನು ಮುಂದುವರಿಸುವುದು, ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟದ್ದು' ಎಂದು ವಿಜಯೇಂದ್ರ ಹೇಳಿದರು.
ನನ್ನ ಅಧ್ಯಕ್ಷತೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪರಿಣಾಮಕಾರಿಯಾದ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೇನೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ, ವರಿಷ್ಠರಿಗೆ ತೃಪ್ತಿಯಿದೆ. ಹೀಗಾಗಿ ನನ್ನನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.