Daily Horoscope
✕

ರಾಹುಲ್​​​​ ಪರ ಸಿದ್ದರಾಮಯ್ಯ ಟ್ವೀಟ್

Webdunia
ಸೋಮವಾರ, 20 ಮಾರ್ಚ್ 2023 (17:30 IST)
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೊ ಯಾತ್ರೆಯ ಯಶಸ್ಸು ಆಡಳಿತಾರೂಢ BJP ನಿದ್ದೆಗೆಡಿಸಿದೆ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತಾಗಿ ಮಹಿಳೆಯರ ಹೇಳಿಕೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡಲು ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರು ತೆರಳಿರುವ ವಿಚಾರವಾಗಿ BJP ಹಾಗೂ ಕಾಂಗ್ರೆಸ್ ನಡುವೆ ವಾಗ್ದಾಳಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿ ರಾಹುಲ್ ಪರವಾಗಿ ಧ್ವನಿ ಎತ್ತಿದ್ದಾರೆ. ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ ನರೇಂದ್ರ ಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ. ಭಾರತ್ ಜೋಡೊ ಯಾತ್ರೆಯ ಯಶಸ್ಸು ಆಡಳಿತಾರೂಢ BJP ಪಕ್ಷದ ನಿದ್ದೆಗೆಡಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪ್ರಿಯತೆ ಅವರಲ್ಲಿ ಅಸೂಯೆ ಹುಟ್ಟಿಸಿದೆ. ಇವರಿಗೆಲ್ಲ ನನ್ನ ಸಂತಾಪಗಳು. ರಾಹುಲ್ ಗಾಂಧಿಯವರ ಹೋರಾಟ ನಿಲ್ಲದು, ಇಡೀ ದೇಶ ಅವರ ಜೊತೆಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಜಿಡ್ಡು ಹಿಡಿದ ದೀಪಗಳನ್ನು ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿದೆ ಸುಲಭ ಸಲಹೆಗಳು

ಪುರುಷರ ಮೇಲಿನ ಗೃಹಹಿಂಸೆ: ಪತ್ನಿಯ ಕಿರುಕುಳದ ವಿರುದ್ಧ ಕಾನೂನುಬದ್ಧವಾಗಿ ಏನು ಮಾಡಬಹುದು

ಅಪ್ಪಾ, ಅಮ್ಮ ನಾನು ಯಾರ ಜೊತೆ ಹೋಗಲಿ..ಡಿವೋರ್ಸ್ ಬಳಿಕ ಮಗುವಿನ ನೋಡಿ ಕಣ್ಣೀರಾದ ಗಂಡ, ಹೆಂಡತಿ Video

ಊಟದ ಮೇಜಿನ ಮೇಲೆಯೇ ಕುಸಿದು ಬಿದ್ದು ರೆಸ್ಟೋರೆಂಟ್ ನೌಕರ ಸಾವು Viral video

ಕಾಂಗ್ರೆಸ್ ವತಿಯಿಂದ ಇಂದು ದೆಹಲಿಯಲ್ಲಿ ಬಹತ್ ಪ್ರತಿಭಟನೆ: ವರ್ತಕರ ಪಾಲಿಗೆ ಮರಣಶಾಸನ

ಮುಂದಿನ ಸುದ್ದಿ