Select Your Language

Notifications

webdunia
webdunia
webdunia
webdunia

ಬಿಜೆಪಿಯಿಂದ ಹುಳಿ ಹಿಂಡುವ ಕೆಲಸ– ಸಿದ್ದರಾಮಯ್ಯ

ಬಿಜೆಪಿಯಿಂದ ಹುಳಿ ಹಿಂಡುವ ಕೆಲಸ– ಸಿದ್ದರಾಮಯ್ಯ
ಹಾಸನ , ಗುರುವಾರ, 4 ಜನವರಿ 2018 (14:35 IST)
ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲದಕ್ಕೂ ಗೃಹ ಸಚಿವರು ರಾಜೀನಾಮೆ ಕೊಡಲು ಆಗುವುದಿಲ್ಲ. ಬಿಜೆಪಿಯವರು ಎಲ್ಲದರಲ್ಲೂ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
 
ಜೀವ ಅಮೂಲ್ಯವಾದುದು, ಕೊಲೆ ನಡೆಯಬಾರದಿತ್ತು. ಕೊಲೆ ಮಾಡಿದವರಿಗೆ ಶಿಕ್ಷೆಯಾಗಬೇಕು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿರುವ ಸಿದ್ದರಾಮಯ್ಯ ಸಮಾಜದಲ್ಲಿ ಕೋಮು ಗಲಭೆ ನಡೆಯಲು ಬಿಜೆಪಿ ಕಾರಣ ಎಂದು ಆರೋಪಿಸಿದ್ದಾರೆ.
 
ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದ್ದೇನೆ ಹೊರತು, ದೇವೇಗೌಡರು ಹೋರಾಟ ಮಾಡಬಾರದು ಎಂದಿಲ್ಲ. ಬಿಜೆಪಿಯ ಭೂಹಗರಣದ ಆರೋಪ ಸುಳ್ಳು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದೀಪಕ್ ಕೊಲೆ ಪ್ರಕರಣ ಸಿಬಿಐ ವಹಿಸಲು ಒತ್ತಾಯಿಸಿ ದೆಹಲಿಯಲ್ಲಿ ಸಂಸದರ ಪ್ರತಿಭಟನೆ