ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಸೋತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್‌ನಲ್ಲಿ ಕಳೆದ ಬಾರಿಗಿಂತ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದಿದೆ. ಇದರಿಂದ ಗೆದ್ದು ಸೋತಿದ್ದೇವೆ ಎಂದಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಜನರ ಬೆಂಬಲ ದೊರೆತಿದೆ. ಇವಿಎಂ ದುರ್ಬಳಕೆ ಕುರಿತು ಈಗಲೂ ಅನುಮಾನವಿದೆ ಎಂದು ತಿಳಿಸಿದ್ದಾರೆ.
ಗುಜರಾತ್ ಚುನಾವಣೆಯ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ತಂತ್ರಗಾರಿಕೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.