ನಿಮ್ಮ ಮೊಮ್ಮಗನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಿ: ದೇವೇಗೌಡರಿಗೆ ಸಿದ್ದರಾಮಯ್ಯ ಗುದ್ದು

Krishnaveni K
ಗುರುವಾರ, 7 ನವೆಂಬರ್ 2024 (09:16 IST)
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಮತಯಾಚನೆ ಮಾಡಿದ ಸಿಎಂ ಸಿದ್ದರಾಮಯ್ಯ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟಿದ್ದಾರೆ.

ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರ ಪರವಾಗಿ ಎಚ್ ಡಿ ದೇವೇಗೌಡರು ಪ್ರಚಾರ ನಡೆಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಅನ್ಯಾಯಗಳ ಬಗ್ಗೆ ದೇವೇಗೌಡರು ವಾಗ್ದಾಳಿ ನಡೆಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ‘ದೇವೇಗೌಡರು ಹೇಳುತ್ತಾರೆ ಕಟುಕರಿಗೆ ಕಣ್ಣೀರು ಬರಲ್ಲ ಅಂತ. ಹಾಸನದಲ್ಲಿ ನಿಮ್ಮ ಮೊಮ್ಮಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ನೂರಾರು ಹೆಣ್ಣು ಮಕ್ಕಳು ಕಣ್ಣೀರು ಹಾಕ್ತಿದ್ದಾರೆ. ಅಲ್ಲಿ ಹೋಗಿ ನಿಮ್ಮ ಕುಟುಂಬದವರು ಯಾರಾದರೂ ಕಣ್ಣೀರು ಹಾಕಿದ್ರಾ? ಅನ್ಯಾಯ ಮಾಡಿದ್ದು ನಿಮ್ಮ ಮೊಮ್ಮಗ ಅಲ್ವಾ? ಆ ಹೆಣ್ಣು ಮಕ್ಕಳ ಕಷ್ಟ ಕೇಳಬೇಕಾಗಿದ್ದು ನಿಮ್ಮ ಕರ್ತವ್ಯ ಅಲ್ಲವೇ?’ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.

ದೇವೇಗೌಡರ ಮೊಮ್ಮಗ, ರೇಪ್ ಕೇಸ್ ನಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಉಲ್ಲೇಖಿಸಿ ವ್ಯಂಗ್ಯ ಮಾಡಿದ್ದಾರೆ. ಇತ್ತೀಚೆಗೆ ನಿಖಿಲ್ ಕುಮಾರಸ್ವಾಮಿ ಮತ್ತು ಎಚ್ ಡಿ ಕುಮಾರಸ್ವಾಮಿ ಮತದಾರರ ಮುಂದೆ ಕಣ್ಣೀರು ಹಾಕಿದ ಪ್ರಸಂಗವನ್ನೇ ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಲೇ ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಕೊಟ್ಟ ಹಣದ ಕಂತೆಯೆಷ್ಟು: ಬಿ ಶ್ರೀರಾಮುಲು ಬಾಂಬ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ