ತಪ್ಪು ಮಾಡಿಲ್ಲಾಂದ್ರೆ ಸೈಟು ಕೊಟ್ಟಿದ್ಯಾಕೆ ಎಂದು ಪ್ರಶ್ನೆ ಮಾಡಿದ್ದ ಸಿದ್ದರಾಮಯ್ಯ ಈಗ ಮಾಡಿದ್ದೂ ಅದೇ (Video)

Krishnaveni K
ಮಂಗಳವಾರ, 1 ಅಕ್ಟೋಬರ್ 2024 (11:54 IST)
ಬೆಂಗಳೂರು: ತಪ್ಪು ಮಾಡಿಲ್ಲ ಅಂದರೆ ಸೈಟು ಕೊಟ್ಟಿದ್ಯಾಕೆ? ತಪ್ಪು ಮಾಡಿದ್ದಕ್ಕೇ ಅಲ್ವಾ ಕೊಟ್ಟಿದ್ದು.. ಎಂದು ಸಿದ್ದರಾಮಯ್ಯ ತಮ್ಮ ಎಂದಿನ ಶೈಲಿಯಲ್ಲೇ ಅಂದು ಮಾಧ್ಯಮಗಳಿಗೆ ಪ್ರಶ್ನೆ ಮಾಡಿದ್ದರು. ಇಂದು ಸಿದ್ದರಾಮಯ್ಯ ಕೂಡಾ ಅದನ್ನೇ ಮಾಡಿದ್ದಾರೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಅಕ್ರಮವಾಗಿ 14 ಸೈಟುಗಳನ್ನು ನೀಡಲಾಗಿದೆ ಎಂದು ಆರೋಪ ಬಂದಿದೆ. ಈ ಸಂಬಂಧ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ. ಎಫ್ ಐಆರ್ ಕೂಡಾ ದಾಖಲಾಗಿದೆ. ಇದರ ಬೆನ್ನಲ್ಲೇ ಪಾರ್ವತಿ ಸಿದ್ದರಾಮಯ್ಯ ಮುಡಾಗೆ ಪತ್ರ ಬರೆದು ತಮಗೆ ನೀಡಿದ್ದ 14 ಸೈಟು ಹಿಂಪಡೆದುಕೊಳ್ಳಲು ಮನವಿ ಮಾಡಿದ್ದರು.

ಇದರ ಬೆನ್ನಲ್ಲೇ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಈ ಹಿಂದೆ ಸಿದ್ದರಾಮಯ್ಯ ಮಾತನಾಡಿದ್ದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಸಿದ್ದರಾಮಯ್ಯ, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ತಪ್ಪು ಮಾಡಿದ್ದಕ್ಕೇ ಅಲ್ವಾ ಸೈಟು ಮರಳಿಸಿದ್ದು. ತಪ್ಪು ಮಾಡಿಲ್ಲ ಅಂದಾದರೆ ಸೈಟು ಕೊಟ್ಟಿದ್ಯಾಕೆ ಎಂದು ಮಾಧ್ಯಮಗಳ ಮುಂದೆ ಪ್ರಶ್ನೆ ಮಾಡುತ್ತಿದ್ದಾರೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಬಿ ವೈ ವಿಜಯೇಂದ್ರ ಹಾಗಿದ್ದರೆ ನೀವೂ ಕೂಡಾ ಈಗ ತಪ್ಪು ಮಾಡಿದ್ದೀರಿ ಎಂದಿದ್ದಕ್ಕೇ ಸೈಟು ಹಿಂದಿರುಗಿಸಿದ್ದೀರಾ ಎಂದು ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಮೊದಲು ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯಪಾಲರ ಅಧಿಕಾರ ವ್ಯಾಪ್ತಿಯ ಬಗ್ಗೆ 2011 ರಲ್ಲಿ ಸಿದ್ದರಾಮಯ್ಯ ಮಾತನಾಡಿದ್ದ ವಿಡಿಯೋವನ್ನು ಬಿಡುಗಡೆ ಮಾಡಿ ಟಾಂಗ್ ಕೊಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments