Publish Date: Fri, 04 Jan 2019 (15:54 IST)
Updated Date: Fri, 04 Jan 2019 (15:56 IST)
ಜನವರಿ ಅಂತ್ಯದೊಳಗೆ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಹಾಗೂ ಜೆಡಿಎಸ್ ಜತೆಗಿನ ಸೀಟು ಹಂಚಿಕೆ ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಈ ತಿಂಗಳೊಳಗೆ ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಇನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಕೈ ಮೇಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಯುಕ್ತಿಕ ವರ್ಚಸ್ಸು ಇಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತೆ. ನಾವು ಸಲಹೆ ಸೂಚನೆ ಮಾತ್ರ ನೀಡುತ್ತೇವೆ. ಅಂತಿಮವಾಗಿ ಹೈಕಮಾಂಡ ನಿರ್ಧಾರ ತೆಗೆದುಕೊಳ್ಳುತ್ತೆ ಎಂದಿದ್ದಾರೆ.