Daily Horoscope
✕

ನಮ್ಮ ಸರ್ಕಾರ ಜಾತಿ ನೋಡಲ್ಲ, ಅಭಿವೃದ್ಧಿಯೊಂದೇ ನಮ್ಮ ಗುರಿ: ಸಿದ್ದರಾಮಯ್ಯ

Krishnaveni K
ಸೋಮವಾರ, 1 ಸೆಪ್ಟಂಬರ್ 2025 (10:02 IST)
ಬೆಂಗಳೂರು: ನಮ್ಮ ಸರ್ಕಾರ ಜಾತಿ ನೋಡಲ್ಲ, ಅಭಿವೃದ್ಧಿಯೊಂದೇ ನಮ್ಮ ಗುರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, "ಉಪ್ಪಾರ ಸಮುದಾಯ ಭವನದ" ಶಂಕುಸ್ಥಾಪನೆ ನೆರವೇರಿಸಿ ಅವರು ಈ ರೀತಿ ಮಾತನಾಡಿದ್ದಾರೆ.

‘ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು, ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ.

ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ.

ಚತುರ್ವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇರಲಿಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ "ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕವಾಗಿ ಸಬಲರಾಗಬೇಕು. ಈ ಉದ್ದೇಶದಿಂದಲೇ ನಾನು ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು.

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರ ಪರಿಣಾಮ ಪ್ರತೀ ಕುಟುಂಬಕ್ಕೆ 5 ರಿಂದ 6 ಸಾವಿರ ರೂಪಾಯಿಯ ನೆರವು ಪ್ರತೀ ತಿಂಗಳು ದೊರೆಯುತ್ತಿದೆ.

ಆರ್ಥಿಕ ಅಸಮಾನತೆ ಸುಮ್ಮನೆ ಭಾಷಣ ಮಾಡಿದರೆ ಹೋಗಲ್ಲ. ಕಾರ್ಯಕ್ರಮ ರೂಪಿಸಿ ಜಾರಿಗೆ ತರುವುದು ಮುಖ್ಯ. ಇದಕ್ಕಾಗಿ ನಮ್ಮ ಸರ್ಕಾರ ನಿಂತರವಾಗಿ ಶ್ರಮಿಸುತ್ತಿದೆ.

ಉಪ್ಪಾರ ಸಮುದಾಯದ ಕುಲಶಾಸ್ತೀಯ ಅಧ್ಯಯನದ ಆಧಾರದಲ್ಲಿ ಮುಂದಿನ‌ ಕ್ರಮ ವಹಿಸಲಾಗುವುದು. ಉಪ್ಪಾರ ಭವನ‌ಗಳಿಗೆ ಹಣ ಒದಗಿಸಲಾಗುವುದು.‌ ಆದರೆ, ನೀವು ಕೂಡ ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿ ಮಾಡುತ್ತೇವೆ ಎನ್ನುವ ಶಪಥ ಮಾಡಬೇಕು.  ನಾವು ನಿಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದೇವೆ, ನೀವು ನಮ್ಮ ಜೊತೆ ಭದ್ರವಾಗಿ‌ ನಿಲ್ಲಿ. ಬದಲಾವಣೆ ಖಂಡಿತವಾಗಿ ಬರಲಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments