Publish Date: Thu, 21 May 2026 (16:29 IST)
Updated Date: Thu, 21 May 2026 (16:31 IST)
ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಮಾಡಿಸಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಜನರೇ ದಂಗೆಯೇಳುವ ದಿನ ದೂರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಇಂದು ಕೇಂದ್ರ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಭ್ರಷ್ಟ, ನಿರ್ಲಜ್ಜ ಬಿಜೆಪಿ ಸರ್ಕಾರದ ವಿರುದ್ಧ ದೇಶದ ಜನತೆ ಮತ್ತೊಂದು ಸುತ್ತಿನ ಸ್ವಾತಂತ್ರ್ಯ ಹೋರಾಟದಂತಹ ಚಳವಳಿ ಆರಂಭಿಸುವ ದಿನಗಳು ದೂರವಿಲ್ಲ ಎಂದಿದ್ದಾರೆ.
ನೀಟ್ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಅವಕಾಶ ನೀಡುವ ಮೂಲಕ 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, ಅನ್ಯಾಯದ ವಿರುದ್ಧದ ಜನರ ದನಿಗೆ ದನಿಗೂಡಿಸಿದೆ.
ರಾಜ್ಯದ 1 ಲಕ್ಷಕ್ಕೂ ಹೆಚ್ಚು ಮಕ್ಕಳು ತಿಂಗಳುಗಟ್ಟಲೆ ಕಠಿಣ ಪರಿಶ್ರಮದಿಂದ ತಯಾರಿ ನಡೆಸಿ, ಪರೀಕ್ಷೆ ಎದುರಿಸಿದ್ದರು. ಕೇಂದ್ರದ ಅಸಮರ್ಥತೆ, ಬೇಜವಾಬ್ದಾರಿತನದಿಂದಾಗಿ ಇಂದು ಈ ಮಕ್ಕಳ ಭವಿಷ್ಯ ಅತಂತ್ರವಾಗಿದೆ. ದೇಶಾದ್ಯಂತ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಮಾತನಾಡಬೇಕಾದ ಪ್ರಧಾನಿ ನರೇಂದ್ರ ಮೋದಿ ಅವರು ನಿಶ್ಚಿಂತರಾಗಿ ವಿದೇಶದಲ್ಲಿ ಕಾಲಕಳೆಯುತ್ತಿದ್ದಾರೆ. ದೇಶದ ಮಕ್ಕಳ ಭವಿಷ್ಯವನ್ನು ಬಿಜೆಪಿಯವರಿಂದ ಕಾಪಾಡಬೇಕಾದ ಸ್ಥಿತಿ ಬಂದೊದಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ