ಪಾರ್ವತಿಗೆ ನೋವಾಗಿ ಹೀಗೆ ಮಾಡಿದ್ದಾಳೆ: ಪತ್ನಿ ಪತ್ರಕ್ಕೆ ಸಿದ್ದರಾಮಯ್ಯಗೆ ಶಾಕ್ ಆಗಿದ್ಯಂತೆ

Krishnaveni K
ಮಂಗಳವಾರ, 1 ಅಕ್ಟೋಬರ್ 2024 (09:49 IST)
ಬೆಂಗಳೂರು: ಮುಡಾ ಸೈಟ್ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪಗಳಿಂದ ಬೇಸತ್ತು ನನ್ನ ಪತ್ನಿ ಪಾರ್ವತಿ ಸೈಟು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿದ್ದಾಳೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ನೀಡಿದ್ದ 14 ಸೈಟುಗಳನ್ನು ಪಾರ್ವತಿ ಸಿದ್ದರಾಮಯ್ಯ ಹಿಂಪಡೆಯುವಂತೆ ಮುಡಾಗೆ ಪತ್ರ ಬರೆದಿದ್ದಾರೆ. ನನ್ನ ಪತಿಗೆ ರಾಜಕೀಯವಾಗಿ ಕಳಂಕ ತಂದಿರುವ ಸೈಟು ನನಗೆ ಬೇಡ ಎಂದು ಪಾರ್ವತಿ ಪತ್ರೆ ಬರೆದಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

‘ನನ್ನ ರಾಜಕೀಯ ಧ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ಗೊತ್ತಿದೆ. ಈ ಅನ್ಯಾಯಕ್ಕೆ ತಲೆಬಾಗದೇ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ರಾಜಕೀಯ ಷಡ್ಯಂತ್ರದಿಂದ ಮನನೊಂದು ನನ್ನ ಪತ್ನಿ ಸೈಟುಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ನನ್ನ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಒಮ್ಮೆಯೂ ಮಧ್ಯಪ್ರವೇಶಿಸದೇ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ಧ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿದ್ದಕ್ಕೆ ನನಗೆ ವಿಷಾಧವಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments