ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

Krishnaveni K
ಬುಧವಾರ, 19 ನವೆಂಬರ್ 2025 (18:57 IST)
ಬೆಂಗಳೂರು: ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ, ಆರ್ ಎಸ್ಎಸ್ ಸಂಘಟನೆ ಸೇರುತ್ತಾರಲ್ಲಾ? ಅವರಿಗೆ ಏನು ಹೇಳೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿಮಾತನಾಡಿದ ಅವರು ‘ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ - ಆರ್.ಎಸ್.ಎಸ್ - ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ - ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು?

ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ - ಆರ್.ಎಸ್.ಎಸ್ ಸೇರಿ ಇವರೇ ಮೂಲ ಆರ್.ಎಸ್.ಎಸ್ ನವರಿಗಿಂತ, ಹೆಡಗೆವಾರ್ ರೀತಿ ಮಾತಾಡ್ತಾರೆ’ ಎಂದರು.

‘ನಾನು ಹಣಕಾಸು ಮಂತ್ರಿಯಾದಾಗ, "ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ" ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

ಮುಂದಿನ ಸುದ್ದಿ
Show comments