Select Your Language

Notifications

webdunia
webdunia
webdunia
webdunia

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

Yaduveer
ಮಡಿಕೇರಿ: ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಗುದ್ದಾಟದ ನಡುವೆ ರಾಜ್ಯದಲ್ಲಿ ಅಭಿವೃದ್ಧಿ ಹಿನ್ನಡೆಯಾಗಿದೆಯೆಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಶಿವಕುಮಾರ್ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್‌ ನಾಯಕರೇ  ಹೇಳಿದ್ದಾರೆಂದು ತಿಳಿಸಿದ್ದಾರೆ.

ರಾಜ್ಯದ ಜನ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಹೀಗಿರುವಾಗ ಅವರು ಜನರ ಪರವಾಗಿ ತಮ್ಮ ಕರ್ತವ್ಯವನ್ನು ಮಾಡಬೇಕು. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲ್ಲಿ, ಆದರೆ ರಾಜ್ಯದ ಆಡಳಿತ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಹೇಳಿದ್ದಾರೆ. 

ಇನ್ನೂ ಸಿಎಂ ಬದಲಾವಣೆ ವಿಚಾರಕ್ಕೆ ನಾವು ಕೈ ಶಾಸಕರ ಜತೆ ಸಂಪರ್ಕ ಬೆಳೆಸಿಲ್ಲ, ಈ ಬಗ್ಗೆ ಮಾಧ್ಯಮದವರೇ ಹೆಚ್ಚು ಮಾಹಿತಿ ನೀಡಬೇಕು ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ