Webdunia - Bharat's app for daily news and videos

Install App

ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

Krishnaveni K
ಶನಿವಾರ, 7 ಮಾರ್ಚ್ 2026 (13:14 IST)
ಮೈಸೂರು: ದಾಖಲೆಯ 17 ನೇ ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿನ್ನೆ 17 ನೇ ಬಜೆಟ್ ಮಂಡಿಸಿದ್ದರು. ಈ ಸಾಲಿನ ಬಜೆಟ್ ಮಂಡಿಸಿದ ಬೆನ್ನಲ್ಲೇ ಇಂದು ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಪತ್ರಕರ್ತರು ಸಿಎಂ ಆಗಿ ಮುಂದುವರಿಯುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಅವರು ಎಲ್ಲವೂ ಹೈಕಮಾಂಡ್ ತೀರ್ಮಾನ ಎಂದಿದ್ದಾರೆ.

‘ನನಗೆ ಹೈಕಮಾಂಡ್ ಮೇಲೆ ಸಂಪೂರ್ಣ ವಿಶ್ವಾಸವಿದೆ. ಸಿಎಂ ಆಗಿ ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ. ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಯಾರು ಏನು ಹೇಳುತ್ತಾರೆ ಎಂಬುದು ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆ ಎರಡು ಬಜೆಟ್ ಮಂಡಿಸುತ್ತೇನೆ. ರಾಜ್ಯದ ಜನತೆಗೆ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂಬ ಬಯಕೆಯಿದೆ. ಕೊನೆಗೆ ತೀರ್ಮಾನ ಮಾಡುವುದು ಹೈಕಮಾಂಡ್. ಇನ್ನು ಮುಂದೆ ಸಿಎಂ ಬದಲಾವಣೆ ಬಗ್ಗೆ ಯಾರೇ ಪ್ರಶ್ನೆ ಮಾಡಿದರೂ  ನನ್ನದು ಇದೇ ಉತ್ತರ’ ಎಂದಿದ್ದಾರೆ.

ಬಜೆಟ್ ಮಂಡನೆ ಬೆನ್ನಲ್ಲೇ ಈಗ ಸಿಎಂ ಬದಲಾವಣೆ ವಿಚಾರ ಮತ್ತೆ ಗರಿಗೆದರುವ ಸೂಚನೆಯಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ಮಹತ್ವದ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments