ಹಾವೇರಿ: ಇಷ್ಟು ದಿನ ನಾನೇ ಐದು ವರ್ಷ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಹಾವೇರಿ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಎದುರೇ ಕುರ್ಚಿ ಬಿಟ್ಟು ಕೊಡುವ ಬಗ್ಗೆ ಶಾಕಿಂಗ್ ಮಾತುಗಳನ್ನಾಡಿದ್ದಾರೆ.
ಮೊನ್ನೆಯಷ್ಟೇ ಸುದೀರ್ಘ ಕಾಲ ಮುಖ್ಯಮಂತ್ರಿ ಎಂದು ದೇವರಾಜ ಅರಸು ದಾಖಲೆ ಮುರಿದಿದ್ದ ಸಿದ್ದರಾಮಯ್ಯ ನಿನ್ನೆ ಹಾವೇರಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಸಿಎಂ ಕುರ್ಚಿ ಬಗ್ಗೆ ಮಾರ್ಮಿಕವಾಗಿ ಮಾತನಾಡಿ ಶಾಕ್ ಕೊಟ್ಟಿದ್ದಾರೆ. ವಿಶೇಷವೆಂದರೆ ಈ ವೇದಿಕೆಯಲ್ಲಿ ಡಿಕೆ ಶಿವಕುಮಾರ್ ಕೂಡಾ ಇದ್ದರು.
ನಾನು ಸಾಕಷ್ಟು ಜನಪರ ಯೋಜನೆಗಳನ್ನು ನೀಡಿದ್ದೇನೆ. ಆದರೆ ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ನನಗಂತೂ ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.
ಜನಾಶೀರ್ವಾದಿಂದ ಇಲ್ಲಿಯವರೆಗೂ ಬಂದಿದ್ದೇನೆ. ಮುಂದೆ ಎಷ್ಟು ದಿನ ಇರ್ತೇನೋ ಗೊತ್ತಿಲ್ಲ. ಹೈಕಮಾಂಡ್ ಹೇಳುವವರೆಗೂ ಮುಂದುವರಿಯುತ್ತೇನೆ. ಆದರೆ ನನ್ನ ಆಡಳಿತದ ಬಗ್ಗೆ ನನಗೆ ತೃಪ್ತಿಯಿದೆ ಎಂದಿದ್ದಾರೆ. ಆ ಮೂಲಕ ಸಿಎಂ ಕುರ್ಚಿ ಬಗ್ಗೆ ಡಿಕೆಶಿ ಎದುರೇ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.