ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

Krishnaveni K
ಶುಕ್ರವಾರ, 14 ನವೆಂಬರ್ 2025 (16:12 IST)
ಬೆಂಗಳೂರು: ಇಂದು ದೇಶದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೆಹರೂ ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿದ ಅವರು ಬಿಜೆಪಿ ಮೇಲೆ ಹರಿಹಾಯ್ದಿದ್ದಾರೆ. ‘ಬಿಜೆಪಿಗೆ ಮಹಾತ್ಮ ಗಾಂಧಿ ಹಾಗೂ ಜವಾಹರಲಾಲ್ ನೆಹರೂ ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್ ಗಾಂಧಿ ಮತ್ತು ನೆಹರೂ ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ’ ಎಂದಿದ್ದಾರೆ.

‘ಅವರು ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ದೇಶ ಪ್ರೇಮ ಹಾಗೂ ಸ್ವಾತಂತ್ರ್ಯ ಪ್ರೇಮಗಳನ್ನು ಬೆಳೆಸಿಕೊಂಡಿದ್ದರು. ಬ್ರಿಟಿಷರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಂಡು ಮಹಾತ್ಮ ಗಾಂಧಿಯವರ ನೆಚ್ಚಿನ ಶಿಷ್ಯರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸುಮಾರು 9 ವರ್ಷಗಳ ಕಾಲ ಕಾರಾಗೃಹದಲ್ಲಿದ್ದು ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ದೇಶದ ಬಜೆಟ್ ಗಾತ್ರ 197 ಕೋಟಿ ರೂ. ಗಳು ಮಾತ್ರ ಇತ್ತು. 

ಎರಡು ಮೂರು ವರ್ಷಗಳ ನಂತರ 4 ಅಂಕಿಗಳ ಹಂತಕ್ಕೆ ತಲುಪಿತು.  ಕೃಷಿ, ನೀರಾವರಿ, ಕೈಗಾರಿಕೆಗಳಲ್ಲಿ ಆಸಕ್ತಿ ಹೊಂದಿದ್ದ ನೆಹರೂ ಅವರು ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ ಬೆಳೆಸುವ ಪ್ರಯತ್ನ ಮಾಡಿದರು. ಪಂಚ ವಾರ್ಷಿಕ ಯೋಜನೆಗಳ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಿದರು’ ಎಂದು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

ಮುಂದಿನ ಸುದ್ದಿ
Show comments