Daily Horoscope
✕

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

Krishnaveni K
ಶುಕ್ರವಾರ, 6 ಫೆಬ್ರವರಿ 2026 (14:03 IST)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಇದೀಗ ಮತ್ತೊಮ್ಮೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ರಾಜ್ಯದ ಕೆಲವು ಕಾಂಗ್ರೆಸ್ ಶಾಸಕರು ನಾಯಕತ್ವ  ಬದಲಾವಣೆ ವಿಚಾರವಾಗಿ ಮೌನವಾಗಿರುವ ಹೈಕಮಾಂಡ್ ಮೇಲೆ ಮುನಿಸಿಕೊಂಡಿದ್ದಾರೆ. ಸದ್ಯದಲ್ಲೇ ದೆಹಲಿಗೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎಂದು ಸುದ್ದಿಯಾಗುತ್ತಿದೆ.

ಇದರ ಬಗ್ಗೆ ಈಗ ಯತೀಂದ್ರ ಸಿದ್ದರಾಮಯ್ಯ, ‘ಯಾರೂ ಬದಲಾವಣೆ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಬರೀ ಮಾಧ್ಯಮಗಳು ಮಾತ್ರ ಚರ್ಚೆ ಮಾಡುತ್ತಿವೆ. ರಾಜ್ಯದಲ್ಲಿ ಬೇರೆ ವಿಚಾರಗಳು ನಡೆಯುತ್ತಿದೆ. ಬಜೆಟ್ ಮಂಡಿಸಬೇಕಿದೆ. ಕೇಂದ್ರವೂ ಹಣ ಕೊಡುತ್ತಿಲ್ಲ. ಅದರ ಬಗ್ಗೆ ಚರ್ಚೆಯಾಗಬೇಕಿದೆ.

ಸದ್ಯಕ್ಕೆ ಯಾರೂ ಸಿಎಂ ಬದಲಾವಣೆ ಮಾಡಬೇಕು ಎಂದು ಹೇಳಿಲ್ಲ. ಹೈಕಮಾಂಡ್ ಕೂಡಾ ಸಿದ್ದರಾಮಯ್ಯನವರನ್ನು ತೆಗಿಯಬೇಕು ಎಂದಿದ್ದಕ್ಕೆ ಮನ್ನಣೆ ಕೊಟ್ಟಿಲ್ಲ. ಹೀಗಾಗಿ ಸದ್ಯದ ಮಟ್ಟಿಗೆ ಯಾವುದೇ ಬದಲಾವಣೆಯಿಲ್ಲ. ನನ್ನ ಪ್ರಕಾರ ಹೈಕಮಾಂಡ್ ನವರು ಸದ್ಯಕ್ಕೆ ಯಾವುದೇ ಬದಲಾವಣೆ ಮಾಡಲ್ಲ ಎಂದು ಸ್ಪಷ್ಟವಾಗಿ ಸಂದೇಶ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರೇ ಐದು ವರ್ಷ ಮುಂದುವರಿಯುತ್ತಾರೆ ಎಂದು ನನಗೆ ವಿಶ್ವಾಸವಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶವನ್ನು ಯಾಕೆ ಹಾಳು ಮಾಡ್ತಿದ್ದೀರಿ.. ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಜಿತ್ ದಿಪ್ಕೆ ತರಾಟೆಗೆ ತೆಗೆದುಕೊಂಡ ಪಬ್ಲಿಕ್ Video

ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ್ ಆನೆ

ಚಿನ್ನದ ಚೈನ್ ಎಂದುಕೊಂಡು ನಕಲಿ ಚಿನ್ನದ ಸರ ಕದ್ದ ಕಳ್ಳ: ಯುವತಿಯ ರಿಯಾಕ್ಷನ್ ಗೆ ನಗು ಗ್ಯಾರಂಟಿ Video

ಚಿಕನ್ ಖರೀದಿಸುತ್ತಿದ್ದ ವ್ಯಕ್ತಿ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಸಾವು: Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments